ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುತ್ತಾ "ಮೋದಿ ಶಿವಲಿಂಗದ ಮೇಲಿನ ಚೇಳು" ಎಂದು ಟೀಕಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ. 


COMMERCIAL BREAK
SCROLL TO CONTINUE READING

ಕಳೆದ ಅಕ್ಟೋಬರ್ ನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್, "ನರೇಂದ್ರ ಮೋದಿ ಶಿವಲಿಂಗದ ಮೇಲಿರುವ ಚೇಳಿನ ಹಾಗೆ,  ಬರಿ ಕೈಯಿಂದ ಅದನ್ನು ಸರಿಸುವುದಕ್ಕೂ ಆಗುವುದಿಲ್ಲ. ಚಪ್ಪಲಿಯಿಂದ ಹೊಡೆಯಲೂ ಸಾಧ್ಯವಿಲ್ಲ" ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ದಾಖಲಾದ ಪ್ರಕರಣವೊಂದರ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ ಶಶಿ ತರೂರ್ ಅವರಿಗೆ ಜಾಮೀನು ನೀಡಿದೆ. 


ದೆಹಲಿ ಕೋರ್ಟ್'ನ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು, 20,000 ರೂ. ಗಳ ವೈಯಕ್ತಿಕ ಮುಚ್ಚಳಿಕೆಯೊಂದಿಗೆ ಜಾಮೀನು ನೀಡಿದ್ದಾರೆ. 


ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಾಜೀವ್ ಬಬ್ಬರ್ ಪ್ರಕರಣ ದಾಖಲಿಸಿದ್ದರು.