ದೆಹಲಿ ಕರೋನವೈರಸ್‌ನ ಮೂರನೇ ತರಂಗವನ್ನು ಎದುರಿಸುತ್ತಿದೆ- ಸಿಎಂ ಅರವಿಂದ್ ಕೇಜ್ರಿವಾಲ್
ನಾವು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ಭಯಪಡುವ ಅಗತ್ಯವಿಲ್ಲ. ನಾವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.
ನವದೆಹಲಿ: ಕಳೆದ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 (COVID-19) ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಿದೆ ಮತ್ತು ಇದನ್ನು ಕರೋನವೈರಸ್‌ನ "ಮೂರನೇ ತರಂಗ" ಎಂದು ಕರೆಯಬಹುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬುಧವಾರ ಹೇಳಿದ್ದಾರೆ.
ದೆಹಲಿಯು COVID-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನಾವು ಇದನ್ನು ಕರೋನವೈರಸ್‌ನ (Coronavirus) ಮೂರನೇ ತರಂಗ ಎಂದು ಕರೆಯಬಹುದು. ನಾವು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹಾಗಾಗಿ ಜನರು ಆತಂಕಕ್ಕೆ ಒಳಗಾಗುವ ಅಥವಾ ಭಯಪಡುವ ಅಗತ್ಯವಿಲ್ಲ. ನಾವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ದೆಹಲಿಯ COVID-19 ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಆರೋಗ್ಯ ಸೌಲಭ್ಯಗಳನ್ನು ನೀಡುವುದು ಮತ್ತು ಸಾವಿನ ಪ್ರಮಾಣವನ್ನು ಸಾಧ್ಯವಾದಷ್ಟು ಕಡಿಮೆ ಮಾಡುವುದು ಸರ್ಕಾರದ ಆದ್ಯತೆಯಾಗಿದೆ ಎಂದವರು ಹೇಳಿದರು.
ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗೆ ದೆಹಲಿಯ ಮೂವರು ಮೇಯರ್‌ಗಳ ಧರಣಿ, ಕಾರಣ...
ನಗರದಲ್ಲಿ ಕರೋನವೈರಸ್ ರೋಗಿಗಳಿಗೆ ಹಾಸಿಗೆಗಳ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಅರವಿಂದ್ ಕೆಜ್ರೀವಾಲ್, ಆದಾಗ್ಯೂ ಕೆಲವು ದೊಡ್ಡ, ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಕೊರತೆಯಿದೆ. ಆದರೆ ನಾವು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದರು.
ವಾಸ್ತವವಾಗಿ ದೆಹಲಿ ಸರ್ಕಾರವು ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಲಭ್ಯತೆಯನ್ನು ಹೆಚ್ಚಿಸಿದೆ. ಆದರೆ ದುರದೃಷ್ಟವಶಾತ್ ದೆಹಲಿ ಹೈಕೋರ್ಟ್ ನಮ್ಮ ನಿರ್ಧಾರವನ್ನು ತಡೆಹಿಡಿದಿದೆ. ಇದನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ಗೆ ಹೋಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.\
ದೆಹಲಿಯಲ್ಲಿ 3 ಕೋಟಿ ರೂ.ಮೌಲ್ಯದ ವಾಚ್ ಗಳು ಕಸ್ಟಮ್ ಅಧಿಕಾರಿಗಳ ವಶಕ್ಕೆ
ದೆಹಲಿಯಲ್ಲಿ ಮಂಗಳವಾರ (ನವೆಂಬರ್ 3) ದಂದು ಮೊದಲ ಬಾರಿಗೆ 6,700 ಹೊಸ COVID-19 ಪ್ರಕರಣಗಳು ದಾಖಲಾಗಿದ್ದು, ನಗರದಲ್ಲಿ ಸೋಂಕಿನ ಪ್ರಮಾಣವು 4 ಲಕ್ಷಕ್ಕೂ ಅಧಿಕವಾಗಿದೆ. ಹಬ್ಬದ ಋತುವಿನಲ್ಲಿ ಮತ್ತು ನಗರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ನಡುವೆ ಸಕಾರಾತ್ಮಕ ಪ್ರಮಾಣವು ಶೇಕಡಾ 11.29 ರಷ್ಟಿದೆ. ಇಲ್ಲಿಯವರೆಗಿನ ಹಿಂದಿನ ಅತಿ ಹೆಚ್ಚು ಏಕದಿನ ಸ್ಪೈಕ್ - 5,891 ಪ್ರಕರಣಗಳು - ಶುಕ್ರವಾರ ದಾಖಲಾಗಿದೆ.
ಹಿಂದಿನ ದಿನ ನಡೆಸಿದ 59,540 ಪರೀಕ್ಷೆಗಳಲ್ಲಿ 6,725 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೆಹಲಿ ಆರೋಗ್ಯ ಇಲಾಖೆ ಹೊರಡಿಸಿದ ಬುಲೆಟಿನ್ ಪ್ರಕಾರ ನಲವತ್ತೆಂಟು ಹೊಸ ಸಾವು ದಾಖಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಕರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 6,652ಕ್ಕೆ ತಲುಪಿದೆ.