ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರಿತ ಬಿಸಿಲಿನ ಪರಿಣಾಮದಿಂದಾಗಿ ದೆಹಲಿ ಸರ್ಕಾರವು ನಗರದ ಶಾಲೆಗಳಲ್ಲಿ ಬೇಸಿಗೆ ರಜೆಯನ್ನು 8ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ವಾರ ವಿಸ್ತರಿಸಲು ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಜುಲೈ 8 ರಂದು ಶಾಲೆಗಳು ಮತ್ತೆ ತೆರೆಯಲಿವೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇನ್ನು ಉನ್ನತ ತರಗತಿಗಳಿಗೆ ಹಿಂದಿನ ವೇಳಾಪಟ್ಟಿಯ ಪ್ರಕಾರದಂತೆ ಸೋಮವಾರದಿಂದ ಪ್ರಾರಂಭವಾಗಲಿದೆ ಎನ್ನಲಾಗಿದೆ. ಈಗ ಸರ್ಕಾರದ ನಿರ್ಧಾರವನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.



"ದೆಹಲಿಯ ಬಿಸಿಲಿನ ಪರಿಣಾಮದಿಂದ 8 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯನ್ನು ಜುಲೈ 8 ರವರೆಗೆ ವಿಸ್ತರಿಸಲಾಗುತ್ತಿದೆ. ಇತರ ತರಗತಿಗಳಿಗೆ ಶಾಲೆಗಳು ಹಿಂದಿನ ವೇಳಾಪಟ್ಟಿಯಂತೆ ಮತ್ತೆ ತೆರೆಯಲ್ಪಡುತ್ತವೆ" ಎಂದು ಹೇಳಿದ್ದಾರೆ. ಈ ಆದೇಶವು ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯವಾಗಲಿದೆ ಎಂದು ಶಿಕ್ಷಣ ಸಚಿವರಾಗಿರುವ ಸಿಸೋಡಿಯಾ ಸ್ಪಷ್ಟಪಡಿಸಿದ್ದಾರೆ. ಇನ್ನು ನಗರದಲ್ಲಿ ಬಿಸಿಲಿನ ಏರಿಕೆ ಇನ್ನು ಮುಂದುವರಿಯಬಹುದು ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.