ಹೊಸದಿಲ್ಲಿ : ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯ ಗರ್ಭಿಣಿ ಮಾಡಿದ್ದ ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅಲ್ಲದೆ ಬಾಲಕಿಗೆ ಗರ್ಭಪಾತ ಮಾತ್ರೆಯನ್ನು ನೀಡಿದ್ದಕ್ಕಾಗಿ ಆತನ ಪತ್ನಿಯನ್ನು ಸಹ ಬಂಧಿಸಲಾಗಿದೆ. ಅಲ್ಲದೆ, ಅಪ್ರಾಪ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಎನ್‌ಐ ಜೊತೆ ಮಾತನಾಡಿದ ಉತ್ತರ ಜಿಲ್ಲೆಯ ಡಿಸಿಪಿ ಸಾಗರ್ ಸಿಂಗ್ ಕಲ್ಸಿ, ಆರೋಪಿಯನ್ನು ಬಂಧಿಸಲಾಗಿದ್ದು, ಅವನನ್ನು ವಿಚಾರಣೆ ನಡೆಸುತ್ತಿದ್ದೇವೆ, ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶಿಸಿದ ಗಂಟೆಗಳ ನಂತರ ಮತ್ತು ಇಂದು ಸಂಜೆ 5 ಗಂಟೆಯೊಳಗೆ ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದ ಕೆಲವೇ ಗಂಟೆಗಳಲ್ಲಿ ಆರೋಪಿಯ ಬಂಧನವಾಗಿದೆ.
ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಫಿಕ್ಸ್ :ಈ ಶುಭದಿನ ನೆರವೇರಲಿದೆ ‘ಪಟ್ಟಾಭಿಷೇಕ’
ಆರೋಪಿ, ಡಬ್ಲ್ಯುಸಿಡಿ ಇಲಾಖೆಯ ಉಪ ನಿರ್ದೇಶಕರು ಎಂದು ತಿಳಿದು ಬಂದಿದೆ. ಅಕ್ಟೋಬರ್ 1, 2020 ರಂದು ಬಾಲಕಿಯ ತಂದೆಯ ನಿಧನದ ನಂತರ ಆಕೆಯನ್ನು ಅಧಿಕಾರಿಯ ಮನೆಯಲ್ಲಿ ಇರಿಸಲಾಗಿತ್ತು. ಮೃತ ವ್ಯಕ್ತಿಯ ಗೆಳೆಯ ಎಂಬ ಮೇಲೆ ನಂಬಿಕೆ ಇತ್ತು. ಆದ್ರೆ ಮಗಳ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.
#WATCH | The now-suspended rape-accused Delhi government official and his wife have been detained by Police.
The official has been booked for allegedly raping his deceased friend's minor daughter for several months. pic.twitter.com/WN7YSqEi5E
— ANI (@ANI) August 21, 2023
ಪಿಟಿಐ ವರದಿಯ ಪ್ರಕಾರ, ಬಾಲಕಿ 12 ನೇ ತರಗತಿಯಲ್ಲಿ ಓದುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಬಾಲಕಿ ಆಸ್ಪತ್ರೆಯ ಸಲಹೆಗಾರರಿಗೆ ಘಟನೆಗಳನ್ನು ಬಹಿರಂಗಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ತನ್ನ ತಂದೆಯ ಮರಣದ ನಂತರ ಆರೋಪಿ ಮತ್ತು ಅವನ ಕುಟುಂಬದೊಂದಿಗೆ ವಾಸಿಸುತ್ತಿದ್ದಳು, ಈ ಸಮಯದಲ್ಲಿ ಅವಳು ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಳು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: "ನಿಮ್ಮ ಮಾಮನ್ನ ನಂಬಬೇಡಿ, ಈಗ ಚಾಚಾನ್ನ ನಂಬಿ"
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಗಳಲ್ಲಿ ಅತ್ಯಾಚಾರ, ನಮ್ರತೆಯ ಆಕ್ರೋಶ, ಕ್ರಿಮಿನಲ್ ಬೆದರಿಕೆ, ಹಾನಿ ಉಂಟುಮಾಡುವುದು, ಒಪ್ಪಿಗೆಯಿಲ್ಲದೆ ಗರ್ಭಪಾತ, ಕ್ರಿಮಿನಲ್ ಪಿತೂರಿ ಮತ್ತು POCSO ಕಾಯ್ದೆ ಸೇರಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.