INX Media case: ಪಿ ಚಿದಂಬರಂ ಜಾಮೀನು ಅರ್ಜಿ ಸಂಬಂಧ ಸ್ಟೇಟಸ್ ರಿಪೋರ್ಟ್ ಸಲ್ಲಿಸಲು ಸಿಬಿಐಗೆ ಸೂಚನೆ

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ತನಿಖಾ ದಳದ ಸ್ಟೇಟಸ್ ರಿಪೋರ್ಟ್ ಕೋರಿದೆ. 

Last Updated : Sep 12, 2019, 02:24 PM IST
INX Media case: ಪಿ ಚಿದಂಬರಂ ಜಾಮೀನು ಅರ್ಜಿ ಸಂಬಂಧ ಸ್ಟೇಟಸ್ ರಿಪೋರ್ಟ್ ಸಲ್ಲಿಸಲು ಸಿಬಿಐಗೆ ಸೂಚನೆ title=

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ತನಿಖಾ ದಳದ ಸ್ಟೇಟಸ್ ರಿಪೋರ್ಟ್ ಕೋರಿದೆ. 

ಏತನ್ಮಧ್ಯೆ ಪಿ.ಚಿದಂಬರಂ ಸಹ ತಮ್ಮ ನ್ಯಾಯಾಂಗ ಬಂಧನದ ವಿರುದ್ಧದ ಅರ್ಜಿಯನ್ನು ಹಿಂತೆಗೆದುಕೊಂಡಿದ್ದು, ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್ 23 ರಂದು ನಡೆಯಲಿದೆ.

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪಿ.ಚಿದಂಬರಂ ಬುಧವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ತಮ್ಮನ್ನು ಸೆ.19ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಸಿಬಿಐ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದರು. ಅಲ್ಲದೆ, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸುವ ಆದೇಶವು ಈ ಕಾನೂನಿನ ತತ್ವಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದರು.

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿ ವಿರುದ್ಧ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಆಗಸ್ಟ್ 20 ರಂದು ತಿರಸ್ಕರಿಸಿತ್ತು. ಬಳಿಕ, ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್ 21ರಂದು ಬೆಳಿಗ್ಗೆ ಚಿದಂಬರಂ ಪರ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಿದರಾದರೂ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಂದು ರಾತ್ರಿ ಪಿ.ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

Trending News