ನವದೆಹಲಿ: ದಂಪತಿ ವಿಚ್ಛೇದನ ಪಡೆಯಬೇಕಾದರೆ ಕನಿಷ್ಠ ಒಂದು ವರ್ಷ ದಾಂಪತ್ಯ ಜೀವನ ನಡೆಸಿರಬೇಕು ಎಂಬ ನಿಯಮವಿದೆ. ಆದರೆ ಕೆಲವೊಂದು ಪ್ರಕರಣಗಳಲ್ಲಿ ಒಂದು ವರ್ಷ ಪೂರೈಕೆ ಮಾಡುವ ಅವಶ್ಯಕತೆ ಇರುವುದಿಲ್ಲ. ಇನ್ನು ಉತ್ತರಾಖಂಡದ ದಂಪತಿ ವಿಚ್ಛೇದನ ಪಡೆಯಲು ಇಲ್ಲಿನ ಕೌಟುಂಬಿಕ ನ್ಯಾಯಾಲಯವೊಂದರಲ್ಲಿ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ನಿರಾಕರಿಸಿದ ಕಾರಣದಿಂದ ಇಬ್ಬರೂ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನು ಓದಿ: ಭೀಕರ ಅಪಘಾತ: ಆರು ಮಂದಿ ಸಾವು, ಹಲವರಿಗೆ ಗಾಯ
ದಂಪತಿ ಏಪ್ರಿಲ್ 4, 2021ರಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು. ಆದರೆ ಕೆಲವೊಂದು ಸಮಸ್ಯೆ ಹಿನ್ನೆಲೆಯಲ್ಲಿ ಏಪ್ರಿಲ್ 14ರ ಬಳಿಕ ಬೇರೆ ಬೇರೆಯಾಗಿ ವಾಸ ಮಾಡಲು ಆರಂಭಿಸಿದ್ದರು. ಆ ಬಳಿಕ ಇಬ್ಬರ ನಡುವೆ ದೈಹಿಕ ಸಂಬಂಧವಿಲ್ಲ ಎಂದು ವಿಚ್ಛೇದನಕ್ಕೆ ಉತ್ತರಾಖಂಡ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣವನ್ನು ನಿರಾಕರಿಸಿತ್ತು.
ಆ ಬಳಿಕ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ದಂಪತಿ, ಅಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಬಳಿಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸಿತ್ತು. ಆದರೆ ಪೀಠವು ಸಹ ವಿಚ್ಛೇದನವನ್ನು ನೀಡಲು ನಿರಾಕರಿಸಿ ಕೌಟುಂಬಿಕ ನ್ಯಾಯಾಲಯ ತೀರ್ಪನ್ನು ಎತ್ತಿಹಿಡಿದಿದೆ.
ಇದನ್ನು ಓದಿ: 'ಹಿಂದೂ ದಂಪತಿಗಳು ನಾಲ್ಕು ಮಕ್ಕಳನ್ನು ಹೆತ್ತು ಇಬ್ಬರನ್ನು ದೇಶಕ್ಕೆ ಅರ್ಪಣೆ ಮಾಡಬೇಕು'
"ದಂಪತಿ ಮಧ್ಯೆ ದೈಹಿಕ ಸಂಬಂಧ ಇಲ್ಲ ಎಂಬುದನ್ನು ವಿಚ್ಛೇದನಕ್ಕೆ ಪರಿಗಣಿಸಬಹುದು. ಆದರೆ ಒಂದು ವರ್ಷ ದಾಂಪತ್ಯ ಪೂರೈಸದ ದಂಪತಿಗೆ ಇದೇ ಕಾರಣದ ಆಧಾರದ ಮೇಲೆ ವಿಚ್ಛೇದನ ನೀಡಲು ಸಾಧ್ಯವಿಲ್ಲ. ದೈಹಿಕ ಸಂಬಂಧವಿಲ್ಲ ಎಂಬುದನ್ನು ಕ್ರೂರತ್ವ ಎಂದು ಪರಿಗಣಿಸಬಹುದೇ ವಿನಃ ವಿಶೇಷ ಪ್ರಕರಣ ಎಂದು ಪರಿಗಣಿಸಲು ಸಾಧ್ಯವಿಲ್ಲ" ಎಂದು ಕೋರ್ಟ್ ಉಚ್ಛರಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.