ಪಿ.ಚಿದಂಬರಂಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ದೆಹಲಿ ಹೈಕೋರ್ಟ್ ಇಂದು ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ಅವರನ್ನು ವಿಚಾರಣೆ ಮುಗಿಸಿದ ನಂತರ ಚಿದಂಬರಂ ಸೆಪ್ಟೆಂಬರ್ 5 ರಿಂದ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. 

Updated: Sep 30, 2019 , 07:02 PM IST
ಪಿ.ಚಿದಂಬರಂಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ದೆಹಲಿ ಹೈಕೋರ್ಟ್ ಇಂದು ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ಅವರನ್ನು ವಿಚಾರಣೆ ಮುಗಿಸಿದ ನಂತರ ಚಿದಂಬರಂ ಸೆಪ್ಟೆಂಬರ್ 5 ರಿಂದ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. 

ಮೊಹರು ಮಾಡಿದ ಕವರ್‌ನಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯದ ಆದೇಶ ಬಂದಿದ್ದು, ಈ ಪ್ರಕರಣದಲ್ಲಿ ಸಹ-ಆರೋಪಿಗಳ ವಿರುದ್ಧ ಮಾಜಿ ಸಚಿವರು ತಮ್ಮ ವಿರುದ್ಧ ಮಾತನಾಡದಂತೆ ಕೇಳಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಚಿದಂಬರಂ ಅವರು ಸಾಕ್ಷ್ಯಗಳನ್ನು ನಾಶ ಮಾಡಲು ಯಾವುದೇ ಅವಕಾಶವಿಲ್ಲ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ ತನಿಖೆ ಮುಂದುವರಿದ ಹಂತದಲ್ಲಿರುವುದರಿಂದ ಮತ್ತು ಚಿದಂಬರಂ ಪ್ರಭಾವಿ ವ್ಯಕ್ತಿಯಾಗಿರುವುದರಿಂದ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲಾಗುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕೋರ್ಟ್ ಆದೇಶದ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಪ್ರತಿಕ್ರಿಯಿಸಿ 'ಈಗ ಕಾಮೆಂಟ್ ಮಾಡುವ ಸ್ಥಿತಿಯಲ್ಲಿಲ್ಲ, ಆದೇಶವನ್ನು ಇನ್ನು ಓದಿಲ್ಲ' ಈ ವಿಚಾರವಾಗಿ ಕಾನೂನು ತಂಡವನ್ನು ಸಂಪರ್ಕಿಸುವುದಾಗಿ ಹೇಳಿದರು.