ವಂದೇ ಮಾತರಂ, ರಾಷ್ಟ್ರಗೀತೆಗೆ ಸಮಾನ ಸ್ಥಾನಮಾನ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

 ಬಿಜೆಪಿ ಮುಖಂಡ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ದೆಹಲಿ ಹೈಕೋರ್ಟ್ ನಲ್ಲಿ ಸೋಮವಾರ ಈ ಅರ್ಜಿ ಸಲ್ಲಿಸಿದ್ದರು.

Updated: Jul 26, 2019 , 02:19 PM IST
ವಂದೇ ಮಾತರಂ, ರಾಷ್ಟ್ರಗೀತೆಗೆ ಸಮಾನ ಸ್ಥಾನಮಾನ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ವಂದೇ ಮಾತರಂ ಮತ್ತು ರಾಷ್ಟ್ರಗೀತೆಗೆ ಸಮಾನ ಸ್ಥಾನಮಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ರವೀಂದ್ರನಾಥ್ ಠ್ಯಾಗೋರ್‌ ಬರೆದಿರುವ 'ಜನ ಗಣ ಮನ' ರಾಷ್ಟ್ರಗೀತೆಗೆ ನೀಡಿರುವಷ್ಟೇ ಸಮಾನ ಗೌರವವನ್ನು ಬಂಗಾಳದ ಕವಿ ಬಂಕಿಮ್ ಚಂದ್ರ ಚಟರ್ಜಿ ಬರೆದಿರುವ 'ವಂದೇ ಮಾತರಂ' ಗೀತೆಗೂ ನೀಡಬೇಕು ಎಂದು ಬಿಜೆಪಿ ಮುಖಂಡ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ದೆಹಲಿ ಹೈಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಿದ್ದರು.

ಅಲ್ಲದೆ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದೂ ಅವರು ಮನವಿ ಮಾಡಿದ್ದರು. ಆದರೆ ಈ ಅರ್ಜಿಯನ್ನು ವಜಾಗೊಳಿಸಿ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.