ನವದೆಹಲಿ: 1984ರ ಸಿಖ್​ ವಿರೋಧಿ ಗಲಭೆಯ ಅಪರಾಧಿ ಸಜ್ಜನ್​ ಕುಮಾರ್​ ಶರಣಾಗಲು ಹೆಚ್ಚಿನ ಸಮಯಾವಕಾಶ ಕೋರಿ ಗುರುವಾರ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್​ ತಿರಸ್ಕರಿಸಿದೆ.


COMMERCIAL BREAK
SCROLL TO CONTINUE READING

1984ರ ಸಿಖ್​ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ ಡಿ. 31ರೊಳಗೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿತ್ತು. 


1984ರ ಅಕ್ಟೋಬರ್​ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್​ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು.