Manish Sisodia: ಅಬಕಾರಿ ನೀತಿ ಪ್ರಕರಣದಲ್ಲಿ ಮನಿಷ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್
Delhi Liquror Policy Case: ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮನೀಷ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
Delhi HC Rejects Bail Plea To Manish Sisodia: ಮನೀಶ್ ಸಿಸೋಡಿಯಾಗೆ ದೆಹಲಿ ಹೈಕೋರ್ಟ್ ನಿಂದ ಭಾರಿ ಹಿನ್ನಡೆಯಾಗಿದೆ. ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಮನೀಶ್ ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್‌ನಿಂದ 6 ವಾರಗಳ ಮಧ್ಯಂತರ ಜಾಮೀನು ಕೋರಿದ್ದರು, ಅದನ್ನು ಹೈಕೋರ್ಟ್ ತಿರಸ್ಕರಿಸಿದೆ.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ಮನೀಶ್ ಸಿಸೋಡಿಯಾ ಅವರು ಹೊಂದಿರುವ ಸ್ಥಾನದಿಂದ ಅವರು ಸಾಕ್ಷಿಗಳು ಮತ್ತು ಸಾಕ್ಷಾಧಾರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹೇಳಿದೆ. ದೆಹಲಿ ಸರ್ಕಾರದ ವಿವಾದಿತ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಆರು ವಾರಗಳ ಮಧ್ಯಂತರ ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶವನ್ನು ಪ್ರಕಟಿಸಿದೆ.
ಮನೀಶ್ ಸಿಸೋಡಿಯಾ ಅವರು ಮಧ್ಯಂತರ ಜಾಮೀನು ಕೋರಿದ್ದರು
ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರಿದ್ದ ನ್ಯಾಯಪೀಠ ಮಧ್ಯಂತರ ಜಾಮೀನು ಅರ್ಜಿಯ ತೀರ್ಪು ನೀಡಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯ ಏಕೈಕ ಉಸ್ತುವಾರಿ ಎಂಬ ಕಾರಣಕ್ಕಾಗಿ ಮಧ್ಯಂತರ ಜಾಮೀನು ಕೋರಿದ್ದರು. ಈ ಪ್ರಕರಣದಲ್ಲಿ ನಿಯಮಿತ ಜಾಮೀನು ಕೋರಿ ಸಿಸೋಡಿಯಾ ಸಲ್ಲಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.
ಪ್ರಸ್ತುತ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ
ಮಾರ್ಚ್ 9 ರಂದು ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ದೆಹಲಿ ಹೈಕೋರ್ಟ್ ಶನಿವಾರ ಸಿಸೋಡಿಯಾ ಅವರ ಆರು ವಾರಗಳ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದೆ ಮತ್ತು ಸಿಸೋಡಿಯಾ ಅವರ ಪತ್ನಿ ಸೀಮಾ ಅವರ ಆರೋಗ್ಯ ಸ್ಥಿತಿಯ ಕುರಿತು ಎಲ್‌ಎನ್‌ಜೆಪಿ ಆಸ್ಪತ್ರೆಯಿಂದ ವರದಿ ಕೋರಿದೆ.
ಇದನ್ನೂ ಓದಿ-Awadesh Rai ಹತ್ಯೆ ಪ್ರಕರಣ, ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ
ಸಿಸೋಡಿಯಾ ಶನಿವಾರ ಪತ್ನಿಯನ್ನು ಭೇಟಿಯಾಗಲು ಆಗಮಿಸಿದ್ದರು
ಮನೀಷ್ ಸಿಸೋಡಿಯಾ ಅವರು ಶನಿವಾರ ತಿಹಾರ್ ಜೈಲಿನಿಂದ ತಮ್ಮ ಮನೆಗೆ ಆಗಮಿಸಿ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿಯಾಗಲು ಹೈಕೋರ್ಟ್‌ನಿಂದ ಅನುಮತಿ ಪಡೆದ ನಂತರ ಇಬ್ಬರೂ ಭೇಟಿಯಾಗಲು ಸಾಧ್ಯವಾಗಲಿಲ್ಲ. ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ಆರೋಗ್ಯ ಹದಗೆಟ್ಟ ಕಾರಣ, ಸಿಸೋಡಿಯಾ ಅವರ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು, ಇದರಿಂದಾಗಿ ಇಬ್ಬರೂ ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ತಿಳಿಸಿವೆ. ನಂತರ, ಸಿಸೋಡಿಯಾ ಅವರು ತಮ್ಮ ನಿವಾಸದಿಂದ ತಿಹಾರ್ ಜೈಲಿಗೆ ಮರಳಿದ್ದರು.
ಇದನ್ನೂ ಓದಿ-Balasore Train Accident: 275 ಸಾವುಗಳಿಗೆ ಯಾರು ಹೊಣೆಗಾರರು? ಸಿಬಿಐ ಹುಡುಕಲಿದೆ ಉತ್ತರ, ರೇಲ್ವೆ ಸಚಿವರ ಶಿಫಾರಸ್ಸು
ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ತಿಹಾರ್ ಜೈಲಿನ ಸೂಪರಿಂಟೆಂಡೆಂಟ್‌ಗೆ ಸಿಸೋಡಿಯಾ ಅವರನ್ನು ತಮ್ಮ ನಿವಾಸಕ್ಕೆ ಕರೆದೊಯ್ಯುವಂತೆ ಸೂಚಿಸಿದ್ದಾರೆ, ಅಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಅವರ ಪತ್ನಿಯನ್ನು ಭೇಟಿ ಮಾಡಲು ಅವರಿಗೆ ಅವಕಾಶ ನೀಡಲಾಗುವುದು ಎನ್ನಲಾಗಿದೆ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.