ನವದೆಹಲಿ: ದೆಹಲಿಯಲ್ಲಿ 17,000 ಕ್ಕೂ ಹೆಚ್ಚು ಹೊಸ ಕೊರೊನಾವೈರಸ್ ಪ್ರಕರಣಗಳು ದಾಖಲಾಗಿವೆ.
ಇನ್ನೊಂದೆಡೆಗೆ ಆರ್ಥಿಕ ರಾಜಧಾನಿ ಮುಂಬಯಿಯಲ್ಲಿ 9925 ಪ್ರಕರಣಗಳು ದಾಖಲಾಗಿವೆ.ದೆಹಲಿಯಲ್ಲಿ 104 ಜನರು ಕೊರೊನಾ (Coronavirus) ಸೋಂಕಿನಿಂದ ಸಾವನ್ನಪ್ಪಿದ್ದರೆ,ಮುಂಬೈನಲ್ಲಿ 54 ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Haridwar Kumbh Mela 2021: 'ಗಂಗೆಯ ಆಶೀರ್ವಾದದಿಂದ ಕೊರೊನಾ ಹರಡಲ್ಲ, ಕುಂಭಮೇಳದ ಹೋಲಿಕೆ ಮರ್ಕಜ್ ಜೊತೆಗೆ ಬೇಡ'
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಾಳೆ ಸರಣಿ ಸಭೆಗಳನ್ನು ನಡೆಸಲಿದ್ದು.ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ನಂತರ ಆರೋಗ್ಯ ಸಚಿವರು, ಮುಖ್ಯ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್‌ನ ಎರಡನೇ ತರಂಗವು ದೆಹಲಿಯಲ್ಲಿ ತೀವ್ರವಾಗಿ ಅಪ್ಪಳಿಸಿದ್ದು, ಭಾನುವಾರದಿಂದ ನಗರವು ದಿನಕ್ಕೆ 10,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸುತ್ತಿದೆ. ಮಂಗಳವಾರ, ನಗರವು 24 ಗಂಟೆಗಳ ಅವಧಿಯಲ್ಲಿ 13,500 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು ಸಂಖ್ಯೆ 7,36,788 ಕ್ಕೆ ತಲುಪಿದೆ.
ಇದನ್ನೂ ಓದಿ: Kumbh Mela 2021: ಕುಂಭಮೇಳಕ್ಕೆ ಮಾರ್ಗಸೂಚಿ ಹೊರಡಿಸಿದ ಕೇಂದ್ರ
ಈಗಾಗಲೇ ಬಿಕ್ಕಟ್ಟನ್ನು ಎದುರಿಸಲು ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಲು ದೆಹಲಿ ಕ್ರಮ ಕೈಗೊಂಡಿದೆ. ಅದರ ಭಾಗವಾಗಿ ಖಾಸಗಿ ಆಸ್ಪತ್ರೆಗಳಿಗೆ ಈಗಾಗಲೇ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಒಂದು ಭಾಗವನ್ನು ಮೀಸಲಿಡಲು ತಿಳಿಸಲಾಗಿದೆ.ನಗರವು ಇಲ್ಲಿಯವರೆಗೆ ಕೋವಿಡ್ ತರಂಗಗಿಂತ ಹೆಚ್ಚು ಅಪಾಯಕಾರಿ ಎಂದು ಕರೆದ ಕೇಜ್ರಿವಾಲ್ ಈ ವಾರದ ಆರಂಭದಲ್ಲಿ ಹಲವಾರು ನಿರ್ಬಂಧಗಳನ್ನು ಘೋಷಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.