ನವದೆಹಲಿ: ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ಶನಿವಾರ (ನವೆಂಬರ್ 20, 2021) ಸಾಮಾಜಿಕ ಮಾಧ್ಯಮದಲ್ಲಿ ದೇಶದ್ರೋಹ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಪೊಲೀಸ್ ದೂರು ದಾಖಲಿಸಿದೆ.


COMMERCIAL BREAK
SCROLL TO CONTINUE READING

ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಕಂಗನಾ ತನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಬರೆದುಕೊಂಡಿರುವ ವಿವಾದಾತ್ಮಕ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ಅಲ್ಲದೇ ಕಂಗನಾ ಹೇಳಿಕೆಯನ್ನು 'ಅಗೌರವ, ಅವಹೇಳನಕಾರಿ ಮತ್ತು ಅವಮಾನಕರ 'ಎಂದು ಕರೆದಿದೆ.


ಇದನ್ನೂ ಓದಿ: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು- ಸಿದ್ಧರಾಮಯ್ಯ 


ದಿಲ್ಲಿಯ ಸಿಖ್ ಸಂಸ್ಥೆ ತನ್ನ ದೂರಿನಲ್ಲಿ, ಕಂಗನಾ ರನೌತ್ ತನ್ನ ಪೋಸ್ಟ್ ಮೂಲಕ "ಉದ್ದೇಶಪೂರ್ವಕವಾಗಿ" ಮತ್ತು ರೈತರ ಪ್ರತಿಭಟನೆಯನ್ನು "ಖಲಿಸ್ತಾನಿ ಚಳುವಳಿಗಳು" ಎಂದು ಬಿಂಬಿಸಿದ್ದಾರೆ ಎಂದು ಆರೋಪಿಸಿದೆ.ಈಗ ದಿಲ್ಲಿಯ ಸಿಖ್ ಸಂಸ್ಥೆ  ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದೆ.


"ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಪೋಸ್ಟ್ ಅನ್ನು ಉದ್ದೇಶಪೂರ್ವಕವಾಗಿ ಸಿದ್ಧಪಡಿಸಲಾಗಿದೆ ಮತ್ತು ಕ್ರಿಮಿನಲ್ ಉದ್ದೇಶದಿಂದ ಹಂಚಿಕೊಳ್ಳಲಾಗಿದೆ" ಎಂದು ಅದು ಆರೋಪಿಸಿದೆ.ದೂರಿನ ಪತ್ರವನ್ನು ಮುಂಬೈನ ಹೆಚ್ಚುವರಿ ಪೊಲೀಸ್ ಕಮಿಷನರ್ ಮತ್ತು ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿರುವ ದೆಹಲಿ ಪೊಲೀಸರ ಸೈಬರ್ ಸೆಲ್‌ ಕಳುಹಿಸಲಾಗಿದೆ


ಡಿಎಸ್‌ಜಿಎಂಸಿ ಅಧ್ಯಕ್ಷ ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಕಂಗನಾ ರಣಾವತ್ ಅವರನ್ನು ಕಟುವಾಗಿ ಟೀಕಿಸಿದ್ದಾರೆ ಮತ್ತು ಅವರು ಪದ್ಮಶ್ರೀಗೆ ಅರ್ಹರಲ್ಲ ಎಂದು ಹೇಳಿದ್ದಾರೆ. ಅವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: RSS Chief: '75 ವರ್ಷಗಳು ನಾವು ಸರಿಯಾದ ದಾರಿಯನ್ನು ಅನುಸರಿಸಿಲ್ಲ, ಹೀಗಾಗಿ ಅಭಿವೃದ್ಧಿ ನಿಂತುಹೋಗಿದೆ'


'ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಥವಾ ಜೈಲಿಗೆ ಹಾಕಬೇಕು.ಇನ್‌ಸ್ಟಾಗ್ರಾಮ್‌ನಲ್ಲಿ ಅವರ  ದ್ವೇಷಪೂರಿತ ಹೇಳಿಕೆ ವಿಚಾರವಾಗಿ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು"ಎಂದು ಸಿರ್ಸಾ ಟ್ವೀಟ್ ಮಾಡಿದ್ದಾರೆ.


'ನಟಿ ಕಂಗನಾ ರಣಾವತ್ ಇನ್ಸ್ಟಾ ಗ್ರಾಂ ನಲ್ಲಿ 7.8 ಮಿಲಿಯನ್ (78 ಲಕ್ಷ) ಕ್ಕೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ.ಆದ್ದರಿಂದ, ಅವರ ಉದ್ದೇಶಪೂರ್ವಕ,ಬೇಜವಾಬ್ದಾರಿ ಮತ್ತು ದೇಶದ್ರೋಹದ ಪೋಸ್ಟ್‌ಗಳು ಭಾರತ ಗಣರಾಜ್ಯದ ಬಗ್ಗೆ ದ್ವೇಷ, ತಿರಸ್ಕಾರ ಮತ್ತು ಅಸಮಾಧಾನವನ್ನು ಪ್ರಚೋದಿಸುವ ಸಾಮರ್ಥ್ಯವನ್ನು ಹೊಂದಿವೆ. ," ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.