ದೆಹಲಿ ಹಿಂಸಾಚಾರ: ಗೃಹ ಸಚಿವ ಅಮಿತ್ ಶಾ ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ? -ಸೋನಿಯಾಗಾಂಧಿ ಪ್ರಶ್ನೆ

ದೆಹಲಿಯಲ್ಲಿನ ಹಿಂಸಾಚಾರದ ಜವಾಬ್ದಾರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಹಿಸಿಕೊಳ್ಳಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹೇಳಿದರು, ಈಶಾನ್ಯ ದೆಹಲಿಯ ಕೆಲವು ಭಾಗಗಳಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ 21 ಜನರು ಸಾವನ್ನಪ್ಪಿದ್ದಲ್ಲದೆ ಕನಿಷ್ಠ 200 ಜನರು ಗಾಯಗೊಂಡಿದ್ದಾರೆ.

Last Updated : Feb 26, 2020, 04:15 PM IST
ದೆಹಲಿ ಹಿಂಸಾಚಾರ: ಗೃಹ ಸಚಿವ ಅಮಿತ್ ಶಾ ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ? -ಸೋನಿಯಾಗಾಂಧಿ ಪ್ರಶ್ನೆ title=

ನವದೆಹಲಿ: ದೆಹಲಿಯಲ್ಲಿನ ಹಿಂಸಾಚಾರದ ಜವಾಬ್ದಾರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಹಿಸಿಕೊಳ್ಳಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹೇಳಿದರು, ಈಶಾನ್ಯ ದೆಹಲಿಯ ಕೆಲವು ಭಾಗಗಳಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ 21 ಜನರು ಸಾವನ್ನಪ್ಪಿದ್ದಲ್ಲದೆ ಕನಿಷ್ಠ 200 ಜನರು ಗಾಯಗೊಂಡಿದ್ದಾರೆ.

'ಕಳೆದ ವಾರದಿಂದ ಗೃಹ ಸಚಿವರು ಏನು ಮಾಡುತ್ತಿದ್ದರು? ಈ ವಾರದ ಆರಂಭದಲ್ಲಿ ಗೃಹ ಸಚಿವರು ಏನು ಮಾಡುತ್ತಿದ್ದರು? ಪರಿಸ್ಥಿತಿ ಹದಗೆಟ್ಟಿರುವುದನ್ನು ಗೃಹ ಸಚಿವಾಲಯ ನೋಡಿದಾಗ ಅರೆಸೈನಿಕ ಪಡೆಗಳನ್ನು ಮೊದಲೇ ಕರೆಸಿಕೊಳ್ಳಲಿಲ್ಲವೇಕೆ" ಎಂದು ಸೋನಿಯಾ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಗೃಹ ಸಚಿವರು ಸೇರಿದಂತೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಿದೆ. ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತದೆ" ಎಂದು ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅವರು ಹೇಳಿದರು. ದೆಹಲಿಯಲ್ಲಿ ಹಿಂಸಾಚಾರವನ್ನು ನಿಗ್ರಹಿಸಲು ಆಡಳಿತವು ಸಮಯಕ್ಕೆ ಸರಿಯಾಗಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು  ಕೇಂದ್ರ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವನ್ನು ದೂಷಿಸಿದರು.

'ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಜನರನ್ನು ತಲುಪಲು ಆಡಳಿತವನ್ನು ಸಕ್ರಿಯಗೊಳಿಸದಿರಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಕೇಂದ್ರ ಸರ್ಕಾರವು ಸಮಾನ ಜವಾಬ್ದಾರಿಯನ್ನು ಹೊಂದಿದೆ" ಎಂದು ಅವರು ಹೇಳಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪೀಡಿತ ಪ್ರದೇಶಗಳಲ್ಲಿ ಉಪಸ್ಥಿತರಿದ್ದು ಜನರೊಂದಿಗೆ ನಿರಂತರ ಸಂವಹನದಲ್ಲಿರಬೇಕು ಎಂದು ಅವರು ಹೇಳಿದರು.

Trending News