ನವ ದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ನ ವಿವಾದಾತ್ಮಕ ದತ್ತುಪುತ್ರಿ ಹನಿಪ್ರೀತ್ ಇನ್ಸಾನ್ ಳನ್ನು ಪಂಚಕುಲ ನ್ಯಾಯಾಲಯವು ಪೊಲೀಸ್ ವಶಕ್ಕೆ ನೀಡಿದೆ.


COMMERCIAL BREAK
SCROLL TO CONTINUE READING

ಪಂಜಾಬ್ನ ಜಿರಾಕ್ಪುರ್ ಪಟಿಯಾಲಾ ರಸ್ತೆಯಿಂದ ಹನಿಪ್ರೀತ್ ರನ್ನು ಮಂಗಳವಾರ ಮಧ್ಯಾಹ್ನ ಬಂಧಿಸಲಾಗಿದೆ ಎಂದು ಪಂಚಕುಲ ಪೊಲೀಸರು ತಿಳಿಸಿದ್ದಾರೆ. ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.


ಗುರ್ಮೀತ್ ರಾಮ್ ರಹೀಮ್ ಇಬ್ಬರು ಸಾದ್ವಿಗಳನ್ನು ಅತ್ಯಾಚಾರ ಮಾಡಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.