ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದಾರೆ. ಬಂಡಾಯ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಹಿತಿ ಹೊರಬಿದ್ದಿದೆ.


COMMERCIAL BREAK
SCROLL TO CONTINUE READING

ಮಧ್ಯಾಹ್ನ 3 ಗಂಟೆಗೆ ಮಾಜಿ ಸಿಎಂ ಫಡ್ನವೀಸ್ ಮತ್ತು ಮಾಜಿ ಸಚಿವ ಶಿಂಧೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಲಿದ್ದಾರೆ. ನಾಳೆ ಪ್ರಮಾಣ ವಚನ ಸ್ವೀಕರಿಸುವ  ಸಾಧ್ಯತೆ ಇದೆ. 


ಇದನ್ನೂ ಓದಿ : Udaipur Murder Case : ISIS ನ ವಿಡಿಯೋ ನೋಡಿ ಕನ್ಹಯ್ಯಾ ಲಾಲ್ ಕೊಂದ ಪಾಪಿಗಳು!


ಹೊಸ ಸರ್ಕಾರಿ ಸೂತ್ರ


ಮೂಲಗಳ ಪ್ರಕಾರ, ಮಹಾರಾಷ್ಟ್ರದ ಹೊಸ ಸಚಿವ ಸಂಪುಟದ ಆರಂಭಿಕ ರೂಪುರೇಷೆ ಕೂಡ ಬಹುತೇಕ ತಯಾರಾಗಲಿದೆ. ಈ ವೇಳೆ ಬಿಜೆಪಿ ಮತ್ತು ಶಿಂಧೆ ಬಣದ ಮೂವರು ಸಚಿವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ದೇವೇಂದ್ರ ಸಿಎಂ, ಶಿಂಧೆ ಉಪ ಮುಖ್ಯಮಂತ್ರಿ


ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಅಂತ್ಯಗೊಳಿಸಲು ರೂಪಿಸಿರುವ ಸೂತ್ರದ ಪ್ರಕಾರ ಬಿಜೆಪಿಯ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಲಿದ್ದಾರೆ, ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಲಿದ್ದಾರೆ. ಶಿಂಧೆ ಬೆಂಬಲದ ಎಲ್ಲ ಶಾಸಕರಿಗೂ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಹೇಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. 


ರಾಜ್ಯಪಾಲರ ಭೇಟಿ ಬಳಿಕ ಸಂಜೆ ಸುದ್ದಿಗೋಷ್ಠಿ


ಈ ನಡುವೆ ಶಿವಸೇನೆಯ ಬಂಡಾಯ ಬಣದ ನಾಯಕ ಏಕನಾಥ್ ಶಿಂಧೆ ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಳಿಕ ಸಂಜೆ ಎರಡೂ ಪಕ್ಷಗಳ ಮುಖಂಡರು ಸುದ್ದಿಗೋಷ್ಠಿ ನಡೆಸಲಿದ್ದಾರೆ.


ಇದನ್ನೂ ಓದಿ : ಔರಂಗಾಬಾದ್ ನಗರವನ್ನು ಸಂಭಾಜಿ ನಗರ ಎಂದು ಮರುನಾಮಕರಣ ಮಾಡಿದ್ದೇಕೆ ಗೊತ್ತೇ?


ಉದ್ಧವ್ ಠಾಕ್ರೆ ತಮ್ಮ ಬಹುಮತವನ್ನು ಸಾಬೀತುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ನಿನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.