ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ನಿರ್ಣಾಯಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೊರೊನಾ ಪಾಸಿಟಿವ್ ಗೆ ಒಳಗಾಗಿದ್ದಾರೆ.
ರಾಜಕೀಯದಲ್ಲಿ ಸಕ್ರಿಯರಾಗಿರುವ ಡಿಂಪಲ್ ಯಾದವ್, ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.ಈಗ ಅವರು ತಮ್ಮ ಕೋವಿಡ್ ಸ್ಥಿತಿಯನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ: ಎಂಇಎಸ್ ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ: ಗುಡುಗಿದ ಸಿಎಂ ಬೊಮ್ಮಾಯಿ
मैंने कोविड टेस्ट कराया जिसकी रिपोर्ट पॉजिटिव है।
मैं पूरी तरह से वैक्सिनेटेड हूं और कोई भी लक्षण अभी दिखाई नहीं दे रहे है।
अपनी और दूसरों की सुरक्षा की दृष्टि से मैंने खुद को अलग कर लिया है।
हाल फिलहाल मुझसे मिलने वाले सभी लोगों से अनुरोध है कि वे अपना टेस्ट जल्द कराएं।
— Dimple Yadav (@dimpleyadav) December 22, 2021
'ನಾನು ಕೋವಿಡ್ ಪರೀಕ್ಷೆಯನ್ನು ಮಾಡಿದ್ದೇನೆ, ಅವರ ವರದಿಯು ಪಾಸಿಟಿವ್ ಆಗಿದ್ದು, ನಾನು ಸಂಪೂರ್ಣವಾಗಿ ಲಸಿಕೆ ಹಾಕಿದ್ದೇನೆ ಮತ್ತು ಯಾವುದೇ ರೋಗಲಕ್ಷಣಗಳನ್ನು ತೋರಿಸುತ್ತಿಲ್ಲ.ನನ್ನ ಮತ್ತು ಇತರರ ಸುರಕ್ಷತೆಗಾಗಿ, ನಾನು ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ" ಎಂದು ಡಿಂಪಲ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಓಮಿಕ್ರಾನ್ ಭೀತಿ: ಕ್ರಿಸ್ ಮಸ್, ಹೊಸ ವರ್ಷ ಆಚರಣೆ ನಿಷೇಧಕ್ಕೆ ಮುಂದಾದ ದೆಹಲಿ ಸರ್ಕಾರ
ಚುನಾವಣೆಯ ಕಾರಣದಿಂದ ರಾಜ್ಯಾದ್ಯಂತ ಪ್ರಚಾರದಲ್ಲಿರುವ ಅಖಿಲೇಶ್ ಯಾದವ್ ಕೂಡ ಡಿಂಪಲ್ ಅವರ ಪಾಸಿಟಿವ್ ವರದಿಯ ನಂತರ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ.ನಾಳೆ ಅವರು ಅಲಿಗಢದಲ್ಲಿ ರಾಷ್ಟ್ರೀಯ ಲೋಕದಳದ ನಾಯಕ ಜಯಂತ್ ಚೌಧರಿ ಅವರೊಂದಿಗೆ ಜಂಟಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.