ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2019-20ನೇ ಹಾಗೂ 2020-21ನೇ ಸಾಲಿಗೆ ಖಾಲಿ ಇರುವ 20 ಗಣಕಯಂತ್ರ ಸಹಾಯಕರು (computer operator) ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ.
ವಿದ್ಯಾರ್ಹತೆ: PUC / ಪದವಿಪೂರ್ವ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.


COMMERCIAL BREAK
SCROLL TO CONTINUE READING

ವೇತನ: ಗಣಕಯಂತ್ರ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,900/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ: ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 7,2020ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕಚೇರಿ ವಿಳಾಸ: ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಚೇರಿ, ಜೆಬಿ-2, 'ಬಿ' ಬ್ಲಾಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಜಿಲ್ಲೆ.