ಡಿಕೆಶಿ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲು
ಗುರುವಾರ ಸಂಜೆ ಇದ್ದಕ್ಕಿದಂತೆ ರಕ್ತದೊತ್ತಡದಲ್ಲಿ ವ್ಯತ್ಯಾಸ ಕಂಡು ಬಂದ ಕೂಡಲೇ ಅವರನ್ನು ಬಿಗಿ ಭದ್ರತೆ ನಡುವೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಆರ್‌ಎಂಎಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗುರುವಾರ ಸಂಜೆ ಇದ್ದಕ್ಕಿದಂತೆ ರಕ್ತದೊತ್ತಡದಲ್ಲಿ ವ್ಯತ್ಯಾಸ ಕಂಡು ಬಂದ ಕೂಡಲೇ ಅವರನ್ನು ಬಿಗಿ ಭದ್ರತೆ ನಡುವೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆಶಿ ಪುತ್ರಿ ಐಶ್ವರ್ಯ ಅವರನ್ನೂ ಸಹ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಇದೇ ವೇಳೆ ನಾಳೆ(ಸೆ.13)ಗೆ ಇಡಿ ಕಸ್ಟಡಿ ಅಂತ್ಯವಾಗುವ ಹಿನ್ನೆಲೆಯಲ್ಲಿ ದೆಹಲಿಯ ಪಿಎಂಎಲ್ ಎ ವಿಶೇಷ ನ್ಯಾಯಾಲಯದಲ್ಲಿ ನಾಳೆ ಮಧ್ಯಾಹ್ನ ಡಿಕೆಶಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಏತನ್ಮಧ್ಯೆ, ನಾಳೆ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಸಹ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಡಿಕೆಶಿಗೆ ಜಾಮೀನು ಸಿಗಲಿದೆಯೇ, ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.