ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕರ್ನಾಟಕ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದೆ. 


COMMERCIAL BREAK
SCROLL TO CONTINUE READING

ಡಿಕೆ ಶಿವಕುಮಾರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗೆ ಹಾಜರಾಗದಿದ್ದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ ಮುಂದೂಡುವಂತೆ ಕಿರಿಯ ವಕೀಲರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್ ಪೀಠ ನಾಳೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದೆ.


ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ಹೈಕೋರ್ಟ್​ ವಿಚಾರಣೆ ನಡೆಸಲಿದ್ದು, ಡಿಕೆಶಿ ಅವರಿಗೆ ಜಾಮೀನು ಸಿಗಲಿದೆಯೇ ಎಂದು ಕಾದು ನೋಡಬೇಕಿದೆ.


ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿತ್ತು. ಬಳಿಕ ಸೆ.4ರಿಂದಲೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಒಂದು ವೇಳೆ ಜಾಮೀನು ಸಿಗದಿದ್ದಲ್ಲಿ ಡಿಕೆಶಿ ತಿಹಾರ್ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಮುಂದುವರಿಯಲಿದೆ.