ಬಿಡುಗಡೆ ಬಳಿಕ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿದ ಡಿಕೆಶಿ

ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿತ್ತು. 

Last Updated : Oct 24, 2019, 05:12 PM IST
ಬಿಡುಗಡೆ ಬಳಿಕ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿದ ಡಿಕೆಶಿ title=

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದು ಬಳಿಕ ಬಿಡುಗಡೆಯಾದ ಬೆನ್ನಲ್ಲೇ, ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಗುರುವಾರ ಪಕ್ಷದ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಭೇಟಿಯಾದರು. ಕಾಂಗ್ರೆಸ್ ಸಂಸದ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿತ್ತು. 25 ಲಕ್ಷ ರೂ. ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಯೊಂದಿಗೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಿಲ್ಲ ಅಥವಾ ಸಾಕ್ಷ್ಯ ನಾಶ ಮಾಡುವಂತಿಲ್ಲ, ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶವನ್ನು ತೊರೆಯುವಂತಿಲ್ಲ ಮತ್ತು ಅಗತ್ಯವಿದ್ದಾಗ ತನಿಖೆಗೆ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 

ಡಿ.ಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 3 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
 

Trending News