ದೆಹಲಿ ಹಿಂಸಾಚಾರದ ಬಗ್ಗೆ ಮೌನ ಮುರಿದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್....!

ಪೌರತ್ವ ಕಾನೂನು ಪ್ರತಿಭಟನೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ದೆಹಲಿಯ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಇಂದು ಕೇಳಿದ ಪ್ರಶ್ನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸಿದ್ದಾರೆ ಮತ್ತು "ಜನರು ಧಾರ್ಮಿಕ ಸ್ವಾತಂತ್ರ್ಯವನ್ನು ಹೊಂದಬೇಕೆಂದು ಅವರು ಬಯಸುತ್ತಾರೆ" ಎಂದು ಹೇಳಿದರು.

Last Updated : Feb 25, 2020, 06:16 PM IST
ದೆಹಲಿ ಹಿಂಸಾಚಾರದ ಬಗ್ಗೆ ಮೌನ ಮುರಿದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್....!  title=
PHOTO COURTESY: Twitter

ನವದೆಹಲಿ: ಪೌರತ್ವ ಕಾನೂನು ಪ್ರತಿಭಟನೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ದೆಹಲಿಯ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಇಂದು ಕೇಳಿದ ಪ್ರಶ್ನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸಿದ್ದಾರೆ ಮತ್ತು "ಜನರು ಧಾರ್ಮಿಕ ಸ್ವಾತಂತ್ರ್ಯವನ್ನು ಹೊಂದಬೇಕೆಂದು ಅವರು ಬಯಸುತ್ತಾರೆ" ಎಂದು ಹೇಳಿದರು.

ದೆಹಲಿಯಲ್ಲಿನ ಹಿಂಸಾಚಾರದ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಟ್ರಂಪ್ ಇದು ಭಾರತಕ್ಕೆ ಸಂಬಂಧಿಸಿದ್ದು ಎಂದು ಹೇಳಿದರು "ನಾವು ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದೇವೆ. ಪ್ರಧಾನಿ ಮೋದಿಜನರು ಧಾರ್ಮಿಕ ಸ್ವಾತಂತ್ರ್ಯವನ್ನು ಹೊಂದಬೇಕೆಂದು ಅವರು ಬಯಸುತ್ತಾರೆ ಎಂದು ಅವರು ಹೇಳಿದರು. ಅವರು ಅದರ ಬಗ್ಗೆ ನಿಜವಾಗಿಯೂ ಶ್ರಮಿಸಿದ್ದಾರೆ. ವೈಯಕ್ತಿಕ ದಾಳಿಯ ಬಗ್ಗೆ ನಾನು ಕೇಳಿದ್ದೇನೆ ಆದರೆ ನಾನು ಅದನ್ನು ಚರ್ಚಿಸಲಿಲ್ಲ. ಇದು ಭಾರತಕ್ಕೆ ಬಿಟ್ಟದ್ದು" ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕಾದ ಅಧ್ಯಕ್ಷ ಟ್ರಂಪ್ ದೆಹಲಿಗೆ ಆಗಮಿಸುವ ಕೆಲವೇ ಗಂಟೆಗಳ ಮೊದಲು ಭಾನುವಾರ ರಾತ್ರಿ ಭುಗಿಲೆದ್ದ ಘರ್ಷಣೆಯಲ್ಲಿ ಪೊಲೀಸ್ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.

Trending News