Lok Sabha Elections 2024: 'ಜಾತಿ, ಧರ್ಮದ ಹೆಸರಿನಲ್ಲಿ ಮತ ಕೇಳಬೇಡಿ', ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ನೀಡಿದ ಎಚ್ಚರಿಕೆ ಏನು?

Election Commission : ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಈಗ ರಾಜಕೀಯ ಪಕ್ಷಗಳು ಬಹಳ ಎಚ್ಚರಿಕೆಯಿಂದ ಇರಬೇಕು.

Written by - Chetana Devarmani | Last Updated : Mar 16, 2024, 06:01 PM IST
  • ಲೋಕಸಭೆ ಚುನಾವಣೆ ದಿನಾಂಕ ಘೋಷಣೆ
  • ಜಾತಿ, ಧರ್ಮದ ಹೆಸರಿನಲ್ಲಿ ಮತ ಕೇಳಬೇಡ
  • ದೇಶದಲ್ಲಿ ಎಲ್ಲೆಡೆ ನೀತಿ ಸಂಹಿತೆ ಜಾರಿ
Lok Sabha Elections 2024: 'ಜಾತಿ, ಧರ್ಮದ ಹೆಸರಿನಲ್ಲಿ ಮತ ಕೇಳಬೇಡಿ', ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ನೀಡಿದ ಎಚ್ಚರಿಕೆ ಏನು? title=
Election Commission

ನವದೆಹಲಿ: ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಶನಿವಾರ (ಮಾರ್ಚ್ 16) ಪ್ರಕಟಿಸಿದೆ. ಈ ಬಾರಿ ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, 18ನೇ ಲೋಕಸಭೆ ರಚನೆಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ದೇಶದಲ್ಲಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ. ಇದರೊಂದಿಗೆ ಮತದಾರರ ನಿರ್ಧಾರದ ಮೇಲೆ ಪ್ರಭಾವ ಬೀರುವ ಯಾವುದೇ ನೀತಿ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ರಾಜಕೀಯ ಪಕ್ಷಗಳು ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಜವಾಬ್ದಾರಿಯುತ ಧೋರಣೆ ಅನುಸರಿಸಬೇಕು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: Lok Sabha Elections 2024: ಕರ್ನಾಟಕದಲ್ಲಿ ಏ.26 & ಮೇ 7ರಂದು ಎರಡು ಹಂತಗಳಲ್ಲಿ ಮತದಾನ

ರಾಜಕೀಯ ಭಾಷಣಗಳ ಮಟ್ಟ ಕುಸಿಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ, ಜಾತಿ, ಧರ್ಮದ ಹೆಸರಿನಲ್ಲಿ ಮತ ಕೇಳಬೇಡಿ. ಮಾದರಿ ನೀತಿ ಸಂಹಿತೆ ಉಲ್ಲಂಘಿಸುವವರನ್ನು ಖಂಡಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು. ಇದರೊಂದಿಗೆ ಮುಖ್ಯ ಚುನಾವಣಾ ಆಯುಕ್ತರು ಜಾಹೀರಾತುಗಳನ್ನು ಸುದ್ದಿಯಾಗಿ ತೋರಿಸಲು ಬಿಡುವುದಿಲ್ಲ, ವೈಯಕ್ತಿಕ ದಾಳಿಯನ್ನು ತಪ್ಪಿಸಬೇಕು ಎಂದು ಹೇಳಿದರು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ತಿಳಿಸಿದರು. 

ಇವಿಎಂ ವಿರುದ್ಧದ ವಿವಿಧ ದೂರುಗಳನ್ನು ನ್ಯಾಯಾಲಯಗಳು 40 ಬಾರಿ ಪರಿಗಣಿಸಿವೆ. ಪ್ರತಿ ಸಂದರ್ಭದಲ್ಲಿ ಎಲ್ಲಾ ಆರೋಪಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು. ಇವಿಎಂಗಳು ಚುನಾವಣಾ ಪ್ರಕ್ರಿಯೆಯನ್ನು ನ್ಯಾಯಯುತ ಮತ್ತು ಉತ್ತಮಗೊಳಿಸಿವೆ ಎಂದು ಎಲ್ಲಾ ಪಕ್ಷಗಳಿಗೂ ಚೆನ್ನಾಗಿ ತಿಳಿದಿದೆ ಎಂದರು.

ಹಿಂಸಾಚಾರ ಮುಕ್ತ ಚುನಾವಣೆ ನಡೆಸಲು ಆಯೋಗ ಬದ್ಧವಾಗಿದೆ ಎಂದು ಹೇಳಿದರು. 2019 ರ ಚುನಾವಣಾ ಫಲಿತಾಂಶದಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) 303 ಸ್ಥಾನ, ಕಾಂಗ್ರೆಸ್ 52, ತೃಣಮೂಲ ಕಾಂಗ್ರೆಸ್ 22, ಬಹುಜನ ಸಮಾಜ ಪಕ್ಷ (ಬಿಎಸ್ಪಿ) 10, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಐದು, ಸಿಪಿಐ(ಎಂ) ಮೂರು ಮತ್ತು ಸಿಪಿಐ ಎರಡು ಸ್ಥಾನಗಳನ್ನು ಗೆದ್ದಿದೆ. 

ಇದನ್ನೂ ಓದಿ: Lok Sabha Elections 2024: ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದ್ರೆ ಜಾಮೀನು ರಹಿತ ಕೇಸ್- ರಾಜೀವ್ ಕುಮಾರ್ 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News