ಬೆಂಗಳೂರು: ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.


COMMERCIAL BREAK
SCROLL TO CONTINUE READING

ಅವರು ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.


ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ವಿಶ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿ ಬೆಳೆದು, ಎರಡು ಬಾರಿ ದೇಶದ ಪ್ರಧಾನಿಯಾದರು.


ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು.ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ, ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು.


ನಾನು ಹಲವು ಬಾರಿ ಸಿಂಗ್‌ರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ ಒದಗಿಸಿದರು. ಆರ್.ಬಿ.ಐ ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲಾ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು.


ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಒದಗಿಬಂದ ಅವಕಾಶದ ಸಂಪೂರ್ಣ ಸದುಪಯೋಗ ಮಾಡಿಕೊಂಡು ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಢವಾಗಿ ಮುನ್ನಡೆಸಿದರು.ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು.


ಇದನ್ನೂ ಓದಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ


ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತಗೊಳಿಸಿರಲಿಲ್ಲ. ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು.


ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮ ವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು.


ಮನಮೋಹನ್ ಸಿಂಗ್ ಅವರ ಅಗಲಿಕೆ ಇಡೀ ವಿಶ್ವ ಆರ್ಥಿಕತೆಗೆ ಆಗಿರುವ ನಷ್ಟ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.


ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂದ ಸದೃಢವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಹಾರ ಕಂಡುಕೊಳ್ಳಲು ಸಾಧ್ಯವಾಯಿತು.


ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ನಿರ್ಗವಿ, ಅತ್ಯಂತ ವಿನಯಶೀಲರಾಗಿದ್ದರು. ತಾನು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಅವತ್ತೇ ಹೇಳಿದ್ದರು‌.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.