ತಮಿಳುನಾಡು ಬಿಜೆಪಿ ಮುಖ್ಯಸ್ಥೆ ತಮಿಲಿಸೈ ಸೌಂದರಾಜನ್ ತೆಲಂಗಾಣ ರಾಜ್ಯಪಾಲೆಯಾಗಿ ನೇಮಕ
ರಾಷ್ಟ್ರಪತಿ ರಾಮನಾಥ್ ಕೊವಿಂದ್ ಇಂದು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ಘೋಷಿಸಿದ್ದಾರೆ.
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೊವಿಂದ್ ಇಂದು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ಘೋಷಿಸಿದ್ದಾರೆ.
ಈ ನೂತನ ರಾಜ್ಯಪಾಲರ ಪಟ್ಟಿಯಲ್ಲಿ ತಮಿಳುನಾಡು ಬಿಜೆಪಿಯ ಮುಖ್ಯಸ್ಥೆ ಡಾ.ತಮಿಲಿಸೈ ಸೌಂದರಾಜನ್ ಮತ್ತು ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಕೂಡ ಸ್ಥಾನ ಪಡೆದಿದ್ದಾರೆ. ಡಾ.ಸೌಂದರಾಜನ್ ಅವರನ್ನು ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಇದೆ ಮೊದಲ ಬಾರಿಗೆ ಈ ನೂತನ ರಾಜ್ಯಕ್ಕೆ ಪ್ರತ್ಯೇಕ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಇನ್ನು ಕಲ್ರಾಜ್ ಮಿಶ್ರಾ ಅವರ ಸ್ಥಾನದಲ್ಲಿ ಬಂಡಾರು ದತ್ತಾತ್ರೇಯ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ವಹಿಸಲಾಗಿದೆ.
ಇವರಿಬ್ಬರಲ್ಲದೆ, ಕೇಂದ್ರದ ಮಾಜಿ ಸಚಿವ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೇರಳ ರಾಜ್ಯಪಾಲರಾಗಿ ಮತ್ತು ಭಗತ್ ಸಿಂಗ್ ಕೊಶ್ಯರಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕಲ್ಯಾಣ್ ಸಿಂಗ್ ಬದಲಿಗೆ ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿದ್ದ ಕಲ್ರಾಜ್ ಮಿಶ್ರಾ ಅವರನ್ನು ರಾಜಸ್ಥಾನದ ಉಸ್ತುವಾರಿ ವಹಿಸುವಂತೆ ಕೋರಲಾಗಿದೆ.