ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು

ದ್ರೌಪದಿ ಮುರ್ಮು ದೇಶದ ಮೊದಲ ಮಹಿಳಾ ಬುಡಕಟ್ಟು ಅಧ್ಯಕ್ಷರಾಗಿದ್ದು, ಎನ್‌ಡಿಎ ಪರವಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದೀಗ ಬಹುಮತಗಳನ್ನು ಪಡೆದು ದೇಶದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

Written by - Bhavishya Shetty | Last Updated : Jul 25, 2022, 11:01 AM IST
  • ದೇಶದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ
  • 15ನೇ ರಾಷ್ಟ್ರಪತಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರಿಸಿದ ಮುರ್ಮು
  • ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭ
ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು title=
Draupadi Murmu

ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಬೆಳಗ್ಗೆ 10.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಷ್ಟ್ರದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಪ್ರಮಾಣ ವಚನ ಬೋಧಿಸಿದ್ದು, ಈ ಸಂದರ್ಭದಲ್ಲಿ 21 ಬಂದೂಕುಗಳ ಗೌರವ ವಂದನೆ ನಡೆಸಲಾಗಿದೆ. 

ಇದನ್ನೂ ಓದಿ: ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ಬ್ಯಾಂಕಿಂಗ್ ಸೇವೆ ಆರಂಭಿಸಿದ ಎಸ್‌ಬಿಐ

ದ್ರೌಪದಿ ಮುರ್ಮು ದೇಶದ ಮೊದಲ ಮಹಿಳಾ ಬುಡಕಟ್ಟು ಅಧ್ಯಕ್ಷರಾಗಿದ್ದು, ಎನ್‌ಡಿಎ ಪರವಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದೀಗ ಬಹುಮತಗಳನ್ನು ಪಡೆದು ದೇಶದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ರಾಷ್ಟ್ರಪತಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಂತ್ರಿ ಮಂಡಳಿಯ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು, ಸರ್ಕಾರಿ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳ ಮುಖ್ಯಸ್ಥರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ. 

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು 'ರಾಷ್ಟ್ರಪತಿ ಭವನ'ಕ್ಕೆ ತೆರಳಲಿದರೆ, ಇಂಟರ್ ಸರ್ವೀಸ್ ಗಾರ್ಡ್ ಆಫ್ ಆನರ್' ನೀಡಿ ನಿರ್ಗಮಿಸುವ ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. 

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನು ದ್ರೌಪದಿ ಮುರ್ಮು ಅವರು ರಾಜ್ ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಗೌರವ ವಂದನೆಯನ್ನು ಸಲ್ಲಿಸಿ ಬಳಿಕ ರಾಜಭವನಕ್ಕೆ ಆಗಮಿಸಿದ್ದರು. 

ಇದನ್ನೂ ಓದಿ: ಕ್ಯಾಂಪಸ್ ನಲ್ಲಿ ನಶೆಯಲ್ಲಿ ತೇಲಾಡುತ್ತಿರುವ ವಿದ್ಯಾರ್ಥಿಗಳು, ರಾಜ್ಯದ ಪ್ರತಿಷ್ಟಿತ ಕಾಲೇಜಿನ ದೃಶ್ಯ

ಇನ್ನು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾಗವಹಿಸಿಲ್ಲ ಎಂದು ತಿಳಿದುಬಂದಿದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News