G-20 Summit : ಅನಾರೋಗ್ಯದ ಹಿನ್ನೆಲೆ ಔತಣಕೂಟಕ್ಕೆ ಮಾಜಿ ಪ್ರದಾನಿ ಹೆಚ್‌ಡಿಡಿ ಗೈರು

H.D.Devegowda : ಅನಾರೋಗ್ಯದ ಹಿನ್ನೆಲೆ ಜಿ-20 ಶೃಂಗಸಭೆಯ ಔತಣಕೂಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಎಕ್ಸ್‌ ಖಾತೆಯ ಮೂಲಕ ತಿಳಿಸಿದ್ದಾರೆ.

Written by - Zee Kannada News Desk | Last Updated : Sep 8, 2023, 01:33 PM IST
G-20 Summit : ಅನಾರೋಗ್ಯದ ಹಿನ್ನೆಲೆ ಔತಣಕೂಟಕ್ಕೆ ಮಾಜಿ ಪ್ರದಾನಿ ಹೆಚ್‌ಡಿಡಿ ಗೈರು title=

HDD Not Attending G-20 Summit : ಮೊದಲ ಬಾರಿಗೆ ಭಾರತ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯು ಅತ್ಯಂತ ವಿಜೃಂಭಣೆಯಿಂದ ನಡೆಯಲು ಸಿದ್ಧವಾಗಿದ್ದು, ದೆಹಲಿಯ ʼಭಾರತ್‌ ಮಂಟಪʼ ದಲ್ಲಿ ಶನಿವಾರ ಮತ್ತು ಭಾನುವಾರ ನಡೆಯಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಔತಣಕೂಣ ನಡೆಯಲಿದ್ದು, ಮಾಜಿ ಪ್ರಧಾನಿಗಳಾದ ಮನಮೋಹನ್‌ ಸಿಂಗ್‌ ಮತ್ತು ಹೆಚ್.ಡಿ.ದೇವೇಗೌಡ ಅವರಿಗೆ ಶನಿವಾರ ನಡೆಯಲಿರುವ ಜಿ-20 ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಅಲ್ಲದೇ ಔತಣಕೂಟಕ್ಕೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳನ್ನು ಕೂಡ ಆಹ್ವಾನಿಸಲಾಗಿದೆ.

ಇದನ್ನ ಓದಿ - G20 ಶೃಂಗಸಭೆ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ 

ಆದರೆ ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಔತಣಕೂಟಕ್ಕೆ ಬರಲಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಎಕ್ಸ್‌ ಖಾತೆ (ಹಿಂದೆ ಟ್ವಿಟರ್‌) ಯಲ್ಲಿ ಮಾಹಿತಿ ನೀಡಿದ ಅವರು ʼ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮಜಿ ಅವರು ಆಯೋಜಿಸಿರುವ ಜಿ-20 ಔತಣಕೂಟದಲ್ಲಿ ನನಗೆ ಆರೋಗ್ಯ ಕಾರಣಗಳಿಂದಾಗಿ ಭಾಗವಹಿಸಲಾಗುತ್ತಿಲ್ಲ. ಈ ವಿಷಯದ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ ಮತ್ತು ಜಿ-20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ಬಯಸುತ್ತೇನೆ ಎಂದು ರಾಷ್ಟ್ರಪತಿ ಭವನ ಮತ್ತು ಪ್ರಧಾನಿ ಕಚೇರಿಯನ್ನು ಟ್ಯಾಗ್‌ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News