ನವದೆಹಲಿ: ಉತ್ತರ ಭಾರತದ ಹಲವಾರು ಭಾಗಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್ ಅನ್ನು ಮೀರಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ರಾಜಸ್ಥಾನಗಳಿಗೆ ಮುಂದಿನ ಎರಡು ದಿನಗಳವರೆಗೆ ರೆಡ್ ಅಲರ್ಟ್ ಘೋಷಿಸಿದೆ.
ಪೂರ್ವ ಉತ್ತರ ಪ್ರದೇಶದ ಭಾಗಗಳಿಗೆ ಹವಾಮಾನ ಇಲಾಖೆ ಆರೆಂಜ್ ಎಚ್ಚರಿಕೆ ನೀಡಿದೆ ಎಂದು ಐಎಮ್‌ಡಿಯ ಪ್ರಾದೇಶಿಕ ಹವಾಮಾನ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಹೇಳಿದ್ದಾರೆ.ಮುಂದಿನ 2-3 ದಿನಗಳಲ್ಲಿ ಕೆಲವು ಭಾಗಗಳಲ್ಲಿ ತಾಪಮಾನವು 47 ಡಿಗ್ರಿ ಸೆಲ್ಸಿಯಸ್ ವರೆಗೆ ಏರಬಹುದು ಎಂದು ಅವರು ಎಚ್ಚರಿಸಿದ್ದಾರೆ. ಬಿಸಿಗಾಳಿಗಾಗಿ ಇದೇ ಮೊದಲ ಬಾರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಶ್ರೀವಾಸ್ತವ ಹೇಳಿದರು.
ಈ ಋತುವಿನಲ್ಲಿ, ತಾಪಮಾನವು ಸಾಮಾನ್ಯವಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ ಏಪ್ರಿಲ್‌ನಲ್ಲಿ ಗಮನಾರ್ಹ ಮಳೆಯಿಂದಾಗಿ ಮೇ ಮಧ್ಯದವರೆಗೆ ಮುಂದುವರೆಯಿತು.ಶನಿವಾರದಂದು ರಾಜಸ್ಥಾನದ ಪಿಲಾನಿ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಿಸಿದೆ.
ಮುಂದಿನ ಐದು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ ಮತ್ತು ತೆಲಂಗಾಣ ಶಾಖದ ಅಲೆಗಳು ಹೆಚ್ಚಾಗಿ ಕಂಡುಬರುತ್ತವೆ ”ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ಬುಲೆಟಿನ್ ನಲ್ಲಿ ತಿಳಿಸಿದೆ.
ಮುಂದಿನ 3-4 ದಿನಗಳಲ್ಲಿ ಛತ್ತೀಸ್‌ಗಢ, ಒಡಿಶಾ, ಗುಜರಾತ್, ಮಧ್ಯ ಮಹಾರಾಷ್ಟ್ರ ಮತ್ತು ವಿದರ್ಭ, ಕರಾವಳಿ ಆಂಧ್ರಪ್ರದೇಶ, ಯಾನಮ್, ರಾಯಲ್ಸೀಮಾ ಮತ್ತು ಉತ್ತರ ಆಂತರಿಕ ಕರ್ನಾಟಕದ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ ಎನ್ನಲಾಗಿದೆ
ಶಾಖದ ತೀವ್ರತೆಯು ಹೆಚ್ಚು ಇರುವಾಗ, ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ ಜನರಿಗೆ ಹೊರಹೋಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಶ್ರೀವಾಸ್ತವ ಹೇಳಿದರು.