ಚಾಮರಾಜನಗರ: ಭಾರೀ ಮಳೆಯಿಂದಾಗಿ ಚಾಮರಾಜನಗರ ಜಿಲ್ಲೆಯಿಂದ ತಮಿಳುನಾಡಿನ ಊಟಿ ಮತ್ತು ಕೇರಳದ ಕೊಚ್ಚಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಸೇವೆಗಳನ್ನು ರದ್ದುಗೊಳಿಸಲಾಗಿದೆ.
ಚಾಮರಾಜನಗರ ಜಿಲ್ಲೆಯಿಂದ ಊಟಿಗೆ 13 ಮತ್ತು ಕ್ಯಾಲಿಕಟ್ ಗೆ 7 ರಾಜ್ಯ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
Due to heavy rain, Karnataka State Road Transport Corporation bus services stopped from Chamarajanagar district for Tamil Nadu's Ooty and Kerala's Kochi
— ANI (@ANI) August 16, 2018
ಮತ್ತೊಂದೆಡೆ ಕರಾವಳಿ, ಗಡಿಭಾಗದ ಕಾಸರಗೋಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದ ರಸ್ತೆಗಳು ಜಲಾವೃತಗೊಂಡಿವೆ. ರಾಜ್ಯದ ಕರಾವಳಿ ಹಾಗೂ ನೆರೆಯ ಕೇರಳದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ವಿವಿಧೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಕರ್ನಾಟಕ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಬಸ್ ಸಂಚಾರವನ್ನು ರದ್ದುಗೊಳಿಸಿದೆ.
ಆದರೆ, ಸೇಲಂ ಮೂಲಕ ಕೇರಳಕ್ಕೆ ತಲುಪುವ ಕೆಎಸ್ಆರ್ಟಿಸಿ ಸೇವೆಗಳಿಗೆ ಯಾವುದೇ ತೊಂದರೆಯಾಗಿಲ್ಲ. ಕೇರಳ ಸಾರಿಗೆ ಸಂಸ್ಥೆಯು ಕರ್ನಾಟಕದ ನಡುವೆ ಸಂಪರ್ಕ ಕಲ್ಪಿಸುವ ಬಸ್ಗಳ ಸಂಚಾರವನ್ನು ರದ್ದುಗೊಳಿಸಿಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ.