ನವದೆಹಲಿ: How To Register For E-Shram Card - ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಆರ್ಥಿಕ ಸಹಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ (Central Government) 'ಇ-ಶ್ರಮ್ ಪೋರ್ಟಲ್' (E-Shram Portal) ಅನ್ನು ಪ್ರಾರಂಭಿಸಿದೆ. ಈ ಪೋರ್ಟಲ್ ಮೂಲಕ, ಭಾರತೀಯ ಕಾರ್ಮಿಕರು ತಮ್ಮ ಕೌಶಲ್ಯದ ಆಧಾರದ ಮೇಲೆ ಉದ್ಯೋಗಗಳನ್ನು ಪಡೆಯುವಲ್ಲಿ ಸಹಾಯವನ್ನು ಪಡೆಯಬಹುದು. ಈ ಯೋಜನೆಯ ಲಾಭ ಪಡೆಯಲು ಬಯಸುವ ಯಾವುದೇ ಕಾರ್ಮಿಕರು ಇ-ಶ್ರಮ್ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಇದಕ್ಕಾಗಿ ಅಧಿಕೃತ ವೆಬ್‌ಸೈಟ್ ಆಗಿರುವ eshram.gov.in ಗೆ ಭೇಟಿ ನೀಡುವ ಮೂಲಕ ಇ-ಶ್ರಮ್ ಕಾರ್ಡ್ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ ನೀವು ಆನ್‌ಲೈನ್‌ನಲ್ಲಿ ನಿಮ್ಮ ಹೆಸರನ್ನು  ನೋಂದಾಯಿಸಿಕೊಳ್ಳಬೇಕು. ಇ-ಶ್ರಮ್ ಕಾರ್ಡ್ ಯೋಜನೆಯು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಬರುತ್ತದೆ.


COMMERCIAL BREAK
SCROLL TO CONTINUE READING

ಇ-ಶ್ರಮ್ ಕಾರ್ಡ್‌ಗೆ ಹೆಸರು ನೋಂದಾಯಿಸುವುದು ಹೇಗೆ?
>> ಇ-ಶ್ರಮಿಕ್ ಕಾರ್ಡ್‌ನ ಲಾಭ ಪಡೆಯಲು, ಮೊದಲು ನೀವು ಇ-ಶ್ರಮ್ ಪೋರ್ಟಲ್‌ಗೆ ಭೇಟಿ ನೀಡಿ.
>> ಇದಕ್ಕಾಗಿ ನೀವು http://register.eshram.gov.in/#/user/self ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
>> ಆನ್ಲೈನ್ ನೋಂದಣಿ ಫಾರ್ಮ್ ನಿಮ್ಮ ಮುಂದೆ ತೆರೆದುಕೊಳ್ಳಲಿದೆ.
>> ಫಾರ್ಮ್‌ನಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡಿದ ಸಂಖ್ಯೆ, ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ.
>> ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ, ನಿಮ್ಮ ಅಧಿಕೃತ  ಮೊಬೈಲ್‌ ಸಂಖ್ಯೆಗೆ OTP ಬರಲಿದೆ, ಈಗ ಅದನ್ನು OTP ಬಾಕ್ಸ್‌ನಲ್ಲಿ ಭರ್ತಿ ಮಾಡಿ.
>> ನಂತರ ರಿಜಿಸ್ಟರ್ ಆಯ್ಕೆಯನ್ನು ಕ್ಲಿಕ್ ಮಾಡಿ ಮತ್ತು ಈಗ ನೀವು ಇ-ಶ್ರಮ್ ಪೋರ್ಟಲ್‌ನಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
>> ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ, ನೀವು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
>> ಈಗ ಸಬ್ಮಿಟ್  ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ದಾಖಲೆಗಳನ್ನು ಸಲ್ಲಿಸಿ.


ಇದನ್ನೂ ಓದಿ- ಸಿಎಂ ಯೋಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುಹೂರ್ತ ಫಿಕ್ಸ್!


ಇ-ಶ್ರಮ್ ಕಾರ್ಡ್‌ನ ಪ್ರಯೋಜನಗಳೇನು?
ಅಸಂಘಟಿತ ವಲಯಕ್ಕೆ ಸಂಬಂಧಿಸಿದ ಕಾರ್ಮಿಕರು ಈ ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿದರೆ, ಅವರಿಗೆ ಕೇಂದ್ರ ಸರ್ಕಾರದಿಂದ 2 ಲಕ್ಷ ರೂಪಾಯಿಗಳ ಅಪಘಾತ ವಿಮೆ ಸೌಲಭ್ಯ ಸಿಗುತ್ತದೆ. ಈ ಕಾರ್ಡ್‌ನಿಂದಾಗಿ, ಕಾರ್ಮಿಕರು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ ಯೋಜನೆ, ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ನೇರ ಪ್ರಯೋಜನಗಳನ್ನು ಪಡೆಯಬಹುದು.


ಇದನ್ನೂ ಓದಿ- PM Modi : ಪಂಚ ರಾಜ್ಯ ಚುನಾವಣೆ ನಂತರ ಗುಜರಾತ್‌ಗೆ ಪ್ರಧಾನಿ ಮೋದಿ ಎಂಟ್ರಿ! ಮುಂದಿನ ಪ್ಲಾನ್ ಏನು?


ಇ-ಶ್ರಮ್ ಕಾರ್ಡ್‌ಗೆ ಅರ್ಹತೆ
ಇ-ಶ್ರಮ್ ಕಾರ್ಡ್‌ಗೆ ನೋಂದಾಯಿಸಿಕೊಳ್ಳುವವರ ವಯಸ್ಸು 18 ರಿಂದ 59 ವರ್ಷಗಳು ಇರಬೇಕು. ಉದ್ಯೋಗಿ ಆದಾಯ ತೆರಿಗೆ ಪಾವತಿಸುತ್ತಿರಬಾರದು. ಅಲ್ಲದೆ ಅವರು EPFO, ESIC ಸದಸ್ಯರಾಗಿರಬಾರದು. ಇ-ಶ್ರಮ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸುವ ಕಾರ್ಮಿಕರಿಗೆ ಕಾರ್ಮಿಕ ಸಚಿವಾಲಯವು 12 ಸಂಖ್ಯೆಗಳ UAN ಅನ್ನು ನೀಡುತ್ತದೆ.


ಇದನ್ನೂ ಓದಿ-​ Lucknow Super Giants: ಲಾಂಚ್ ಆಗುವ ಮೊದಲೇ ಲಕ್ನೋ ಸೂಪರ್ ಜೈಂಟ್ಸ್ ಜೆರ್ಸಿ ಲೀಕ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.