ದೆಹಲಿಯಲ್ಲಿ ಭೂಕಂಪ!
ಭಾನುವಾರ ದೆಹಲಿ- ಎನ್.ಸಿ.ಆರ್ ನ ಕೆಲವು ಭಾಗಗಳಲ್ಲಿ ಭೂಕಂಪನ ಅನುಭವವಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ನವದೆಹಲಿ: ಭಾನುವಾರ ದೆಹಲಿ- ಎನ್.ಸಿ.ಆರ್ ನ ಕೆಲವು ಭಾಗಗಳಲ್ಲಿ ಭೂಕಂಪನ ಅನುಭವವಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಆದರೆ ಈ ಭೂಕಂಪನದ ತೀವ್ರತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಇನ್ನು ವರದಿ ನೀಡಬೇಕಾಗಿದೆ.ಒಂದು ಅಂದಾಜಿನ ಪ್ರಕಾರ ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5 ಕ್ಕಿಂತ ಕಡಿಮೆ ಇದೆ ಎನ್ನಲಾಗುತ್ತಿದೆ.
ಭೂಕಂಪನದಿಂದ ಇದುವರೆಗೆ ಯಾವುದೇ ಹಾನಿಯಾದ ಕುರಿತು ವರದಿಯಾಗಿಲ್ಲ ಎಂದು ತಿಳಿದು ಬಂದಿದೆ. ಇನ್ನೊಂದೆಡೆ ಸಾಮಾಜಿಕ ಮಾಧ್ಯಮಗಳಲ್ಲಿ ಜನರರು ಭೂಕಂಪನದ ಅನುಭವದ ಬಗ್ಗೆ ಟ್ವೀಟ್ ಮಾಡಿಕೊಂಡಿದ್ದಾರೆ.