Delhi earthquake : ದೆಹಲಿಯಲ್ಲಿ ಲಘು ಭೂಕಂಪ.. 5.2 ತೀವ್ರತೆ ದಾಖಲು
Earthquake in Delhi Today : ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭಾನುವಾರ ಬೆಳಿಗ್ಗೆ ಅಫ್ಘಾನಿಸ್ತಾನದ ಫೈಜಾಬಾದ್ ಬಳಿ 5.2 ತೀವ್ರತೆಯ ಭೂಕಂಪನ ವರದಿಯಾಗಿದೆ. ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಲಘು ಭೂಕಂಪ ಸಂಭವಿಸಿದೆ.
Earthquake in Delhi : ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಇಂದು ಲಘು ಭೂಕಂಪನದ ಅನುಭವವಾಗಿದೆ. ಯಾವುದೇ ಪ್ರಾಣಾಪಾಯ ಮತ್ತು ಹಾನಿಯ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ. ಬೆಳಿಗ್ಗೆ 11.23 ರ ಸುಮಾರಿಗೆ ಲಘು ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರಜ್ಞರು ತಿಳಿಸಿದ್ದಾರೆ.
ಚಂಡೀಗಢ ಸೇರಿದಂತೆ ಪಂಜಾಬ್ ಮತ್ತು ಹರಿಯಾಣದ ಹಲವೆಡೆ ಕಂಪನದ ಅನುಭವವಾಗಿದೆ. ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭಾನುವಾರ ಬೆಳಿಗ್ಗೆ ಅಫ್ಘಾನಿಸ್ತಾನದ ಫೈಜಾಬಾದ್ ಬಳಿ 5.2 ತೀವ್ರತೆಯ ಭೂಕಂಪನ ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಫೈಜಾಬಾದ್‌ನ ಆಗ್ನೇಯಕ್ಕೆ 79 ಕಿಮೀ ದೂರದಲ್ಲಿದೆ ಎಂದು ಸಂಸ್ಥೆ ತಿಳಿಸಿದೆ. ಭೂಕಂಪವು 11:19 AM IST ಕ್ಕೆ ಮೇಲ್ಮೈಯಿಂದ 220 ಕಿಮೀ ಆಳದಲ್ಲಿ ಸಂಭವಿಸಿದೆ.
ಇದನ್ನೂ ಓದಿ: ಅಡುಗೆ ಭಟ್ಟನಿಗೆ ಕಷ್ಟಯಾಕೆ ಆಂತ ಗ್ಯಾಸ್ ಮೇಲೆ ಕುಳಿತ ಕೋಳಿ..! ಆಮೇಲೆ ಏನಾಯ್ತು..?
ಚಂಡೀಗಢ, ಪಂಜಾಬ್ ಮತ್ತು ಹರಿಯಾಣದ ಹಲವೆಡೆ ಕಂಪನದ ಅನುಭವವಾಗಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಶ್ರೀನಗರ ಮತ್ತು ಪೂಂಚ್‌ನಲ್ಲಿಯೂ ಸಣ್ಣ ಪ್ರಮಾಣದ ಕಂಪನಗಳು ವರದಿಯಾಗಿವೆ. ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಅಫ್ಘಾನಿಸ್ತಾನದ ಫೈಜಾಬಾದ್ ಬಳಿ ಭಾನುವಾರ ಬೆಳಿಗ್ಗೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಫೈಜಾಬಾದ್‌ನಿಂದ ಆಗ್ನೇಯಕ್ಕೆ 79 ಕಿಲೋಮೀಟರ್ ದೂರದಲ್ಲಿದೆ ಎಂದು ಸಂಸ್ಥೆ ತಿಳಿಸಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಶನಿವಾರ ಸಂಜೆ 3.3-3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಸಂಜೆ 5.15ಕ್ಕೆ ಮೊದಲ ಕಂಪನ ಸಂಭವಿಸಿದ್ದು, ಸಂಜೆ 5.28ಕ್ಕೆ ಎರಡನೇ ಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರಜ್ಞರ ಪ್ರಕಾರ ಅಫ್ಘಾನಿಸ್ತಾನದ ಫೈಜಾಬಾದ್ ಬಳಿ 5.9 ತೀವ್ರತೆಯ ಭೂಕಂಪ ಸಂಭವಿಸಿದೆ. ಇದಲ್ಲದೆ, ಚೀನಾ, ತಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್‌ನ ಹಲವೆಡೆ ಕಂಪನಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ