Earthquake Today: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು
Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯಷ್ಟು ದಾಖಲಾಗಿದೆ.
Earthquake In Maharashtra: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು (ಮಾರ್ಚ್ 21) ಗುರುವಾರ ಬೆಳಿಗ್ಗೆ 6:08ರ ಸುಮಾರಿಗೆ ಭೂಕಂಪದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 4.5ರಷ್ಟಿತ್ತು ಎಂದು ತಿಳಿದುಬಂದಿದೆ. ಆದಾಗ್ಯೂ, ಇದುವರೆಗೂ ಯಾವುದೇ ಆಸ್ತಿ-ಪಾಸ್ತಿ, ಜೀವಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ಕುರಿತಂತೆ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) , "21-03-2024, 06:08:30 ISTಗೋಲಿ, ಮಹಾರಾಷ್ಟ್ರದ ಹಿಂಗೋಲಿಯಲ್ಲಿ (ಅಕ್ಷಾಂಶ: 19.48 ಮತ್ತು ರೇಖಾಂಶ: 77.30) 10 ಕಿಮೀ ಆಳದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.
Lok Sabha Election 2024: ಲೋಕಸಭೆ ಚುನಾವಣೆಗೆ 21 ರಾಜ್ಯಗಳ 102 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಗಮನಾರ್ಹವಾಗಿ, ನಿನ್ನೆ ಮಹಿಪುರದಲ್ಲಿ ಸಹ ಭೂಕಂಪದ ಅನುಭವವಾಗಿತ್ತು. ಭೂಕಂಪದ ತೀವ್ರತೆ 3.0ರಷ್ಟಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಟ್ವೀಟ್ ಮಾಡಿತ್ತು.
ಇದನ್ನೂ ಓದಿ- Lok Sabha Election 2024: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ
ಕಳೆದ ವಾರ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ 3.1 ತೀವ್ರತೆಯ ಭೂಕಂಪ, ಸಿಯೋನಿಯಲ್ಲಿ 3.6ತೀವ್ರತೆಯ ಭೂಕಂಪ ವರದಿಯಾಗಿತ್ತು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.