ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್‌ಗೆ ಇಸಿ ನೋಟಿಸ್

ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನ ಮೇ 19ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು. 

Last Updated : May 18, 2019, 10:47 AM IST
ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್‌ಗೆ ಇಸಿ ನೋಟಿಸ್ title=

ನವದೆಹಲಿ: ಚುನಾವಣಾ ನೀತಿ ಸಂಹಿತಿ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಗುರುದಾಸ್ಪುರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್ ಗೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ. 

ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನ ಮೇ 19ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು. ಆದಾಗ್ಯೂ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಬಹಿರಂಗ ಪ್ರಚಾರದ ಅವಧಿ ಮುಗಿದ ಬಳಿಕವೂ ಪ್ರಚಾರ ಸಭೆ ನಡೆಸಿದ್ದರಿಂದ ಆಯೋಗ ನೋಟಿಸ್ ಜಾರಿ ಮಾಡಿದೆ. 

ಗುರುದಾಸ್ಪುರದ ಸಂಸದೀಯ ಕ್ಷೇತ್ರವನ್ನು 1998, 1999, 2004 ಮತ್ತು 2014 ರಲ್ಲಿ ಬಿಜೆಪಿ ಟಿಕೆಟ್ ಪಡೆದು ನಟ ವಿನೋದ್ ಖನ್ನಾ ಪ್ರತಿನಿಧಿಸಿ ಗೆಲುವು ಸಾಧಿಸಿದ್ದರು.

Trending News