ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಒತ್ತಾಯಿಸಿರುವ ಬೆನ್ನಲ್ಲೇ, ಅಮರನಾಥ ಯಾತ್ರೆ ಬಳಿಕ ಚುನಾವಣೆ ನಡೆಸುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗ ಹೇಳಿದೆ. 


COMMERCIAL BREAK
SCROLL TO CONTINUE READING

ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳು ಈವರ್ಷದ ಅಂತ್ಯದಲ್ಲಿ ನಡೆಯುವ ಸಾಧ್ಯತೆಯಿದ್ದು, ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 


ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿದ ಚುನಾವಣಾ ಆಯೋಗ, ಜಮ್ಮು-ಕಾಶ್ಮೀರದ ಪರಿಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಅಮರನಾಥ ಯಾತ್ರೆ ಬಳಿಕ ಚುನಾವಣೆ ಘೋಷಣೆ ಮಾಡಲಿದ್ದು, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಹರಿಯಾಣ ರಾಜ್ಯಗಳಿಗೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿದೆ" ಎಂದು ಹೇಳಿದೆ.