ಇಂದು ಸಂಜೆ 5 ಗಂಟೆಗೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ; ಆಯೋಗದಿಂದ ಪತ್ರಿಕಾಗೋಷ್ಠಿ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಹಾಲಿ ಕೇಂದ್ರ ಸರಕಾರದ ಅಧಿಕಾರಾವಧಿ ಜೂನ್ 3ರಂದು ಕೊನೆಗೊಳ್ಳಲಿದೆ.

Last Updated : Mar 10, 2019, 12:47 PM IST
ಇಂದು ಸಂಜೆ 5 ಗಂಟೆಗೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ; ಆಯೋಗದಿಂದ ಪತ್ರಿಕಾಗೋಷ್ಠಿ title=

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಇಂದು ಸಂಜೆ 5 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಹಾಲಿ ಕೇಂದ್ರ ಸರಕಾರದ ಅಧಿಕಾರಾವಧಿ ಜೂನ್ 3ರಂದು ಕೊನೆಗೊಳ್ಳಲಿದೆ. ಅಷ್ಟರೊಳಗೆ ಲೋಕಸಭಾ ಚುನಾವಣೆ ಮುಗಿದು ಹೊಸ  ಅಸ್ತಿತ್ವಕ್ಕೆ ಬರಬೇಕಿದೆ. ಏಪ್ರಿಲ್ ಕೊನೆ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಏಳರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಲೋಕಸಭೆ ಚುನಾವಣೆ ಜೊತೆಗೆ ಚುನಾವಣಾ ಆಯೋಗ ಆಂಧ್ರ ಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನಸಭಾ ಕ್ಷೇತ್ರಗಳಿಗೆ ಸಹ ಅವಧಿಗೆ ಮುನ್ನ ಚುನಾವಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಯಾಗಿರುವುದರಿಂದ 6 ತಿಂಗಳೊಳಗೆ ಅಂದರೆ ಮೇ ತಿಂಗಳೊಳಗೆ ಹೊಸದಾಗಿ ಚುನಾವಣೆ ನಡೆಸಬೇಕು. ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಜಮ್ಮು-ಕಾಶ್ಮೀರ ಎಲೆಕ್ಷನ್ ನಡೆಸಲು ಭಾರತ-ಪಾಕಿಸ್ತಾನ ಗಡಿಭಾಗದಲ್ಲಿ ಉದ್ವಿಗ್ನ ವಾತಾವರಣ ಸದ್ಯಕ್ಕೆ ಇರುವುದು ಕೂಡ ಚುನಾವಣಾ ಆಯೋಗಕ್ಕೆ ತೊಂದರೆಯಾಗಿದೆ.
 

Trending News