Assembly Election 2023: ಭಾರತದ ಚುನಾವಣಾ ಆಯೋಗ ಇಂದು ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ನಿರೀಕ್ಷೆಯಿದೆ.  ಲಭ್ಯವಿರುವ ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೇಂದ್ರ ಚುನಾವಣಾ ಆಯೋಗ ಮಧ್ಯಪ್ರದೇಶ, ಮಿಜೋರಾಂ, ತೆಲಂಗಾಣ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಘೋಷಿಸಲಿದೆ. 


COMMERCIAL BREAK
SCROLL TO CONTINUE READING

ಪಂಚ ರಾಜ್ಯಗಳ ಚುನಾವಣೆಗೆ ಸಿದ್ಧತೆ: 
ಈ ವರ್ಷಾಂತ್ಯದ ಒಳಗೆ ನಡೆಯಬೇಕಿರುವ ಪಂಚರಾಜ್ಯಗಳ ಚುನಾವಣೆಗೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗದಿಂದ ಬ್ಲೂ ಪ್ರಿಂಟ್ ಸಿದ್ಧವಾಗಿದ್ದು, ಈ ರಾಜ್ಯಗಳು ನವೆಂಬರ್ ಎರಡನೇ ವಾರದಿಂದ ಡಿಸೆಂಬರ್ ಮೊದಲ ವಾರದವರೆಗೆ ವಿವಿಧ ದಿನಾಂಕಗಳು ಮತ್ತು ಹಂತಗಳಲ್ಲಿ ವಿಧಾನಸಭಾ ಚುನಾವಣೆಗಳಿಗೆ ಮತದಾನಕ್ಕೆ ಹೋಗಬಹುದು. ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ಕಳೆದ ಬಾರಿಯಂತೆ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ. ಆದರೆ ಎಲ್ಲಾ ರಾಜ್ಯಗಳ ಮತಗಳ ಎಣಿಕೆಯನ್ನು ಒಂದೇ ಸಮಯದಲ್ಲಿ ತೆಗೆದುಕೊಳ್ಳಲು ನಿರ್ಧರಿಸಬಹುದು. 


ಇದನ್ನೂ ಓದಿ- Daily GK Quiz: ಭಾರತದ ಯಾವ ರಾಜ್ಯವು ವಿಶ್ವದ ಅತಿದೊಡ್ಡ ಶಾಲೆಯನ್ನು ಹೊಂದಿದೆ?


ಇನ್ನೂ ಈ ಸಂಬಂಧ ಕಳೆದ ಶುಕ್ರವಾರ ಐದು ರಾಜ್ಯಗಳ ಚುನಾವಣಾ ವೀಕ್ಷಕರೊಂದಿಗೆ ಸಭೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗ ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸುವುದು ಹೇಗೆ ಎಂಬ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿದೆ. 


ಇದನ್ನೂ ಓದಿ- ಶೀಘ್ರದಲ್ಲೇ ಬರಲಿದೆ ವಂದೇ ಭಾರತ್ ಸ್ಲೀಪರ್‌ ರೈಲು


ಪಂಚ ರಾಜ್ಯಗಳಲ್ಲಿ ಯಾವ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? ಯಾವ ಸರ್ಕಾರದ ಅಧಿಕಾರಾವಧಿ ಯಾವಾಗ ಕೊನೆಗೊಳ್ಳಲಿದೆ? 
ಸದ್ಯ ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ. ಆದರೆ ಭಾರತ್ ರಾಷ್ಟ್ರ ಸಮಿತಿ ಅಂದರೆ BRS (ಹಿಂದೆ ತೆಲಂಗಾಣ ರಾಷ್ಟ್ರ ಸಮಿತಿ) ತೆಲಂಗಾಣದಲ್ಲಿ ಅಧಿಕಾರದಲ್ಲಿದೆ. 


* 40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಯ ಅವಧಿ ಡಿಸೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಈಶಾನ್ಯ ರಾಜ್ಯದಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ.
* ಇದಲ್ಲದೆ, ಛತ್ತೀಸ್‌ಗಢ (90-ಸದಸ್ಯ), ಮಧ್ಯಪ್ರದೇಶ (230-ಸದಸ್ಯ), ರಾಜಸ್ಥಾನ (200-ಸದಸ್ಯ), ಮತ್ತು ತೆಲಂಗಾಣ (119-ಸದಸ್ಯ) ಅಸೆಂಬ್ಲಿಗಳ ಅವಧಿಯು ಜನವರಿಯಲ್ಲಿ ಕೊನೆಗೊಳ್ಳುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.