ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ನಿವಾಸದ ಮೇಲೆ ಇಡಿ ದಾಳಿ
Dawood Ibrahim: 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಮತ್ತು ಪರಾರಿಯಾದ ಗ್ಯಾಂಗ್ಸ್ಟರ್ ದಾವೂದ್ ಇಬ್ರಾಹಿಂ ಸಹೋದರಿ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.
ಮುಂಬೈ: ಭೂಗತ ಜಗತ್ತಿನ ಕಾರ್ಯಾಚರಣೆಗಳು, ಅಕ್ರಮ ಆಸ್ತಿ ವ್ಯವಹಾರಗಳು ಮತ್ತು ಹವಾಲಾ (Hawala) ವಹಿವಾಟುಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಮಂಗಳವಾರ (ಫೆಬ್ರವರಿ 15) ಮುಂಬೈನಲ್ಲಿ (Mumbai) ಅನೇಕ ಶೋಧಗಳನ್ನು ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕೋರ್ಟ್ ಆದೇಶ ಮಕ್ಕಳಿಗೆ ಮಾತ್ರ ಹೇಳಿರೋದು, ಶಿಕ್ಷಣ ಸಿಬ್ಬಂದಿಗೆ ಅಲ್ಲ: ಯು ಟಿ ಖಾದರ್
ಭೂಗತ ಲೋಕಕ್ಕೆ (Underworld) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ಒಬ್ಬ ವ್ಯಕ್ತಿಯನ್ನು ಮುಂಬೈನಲ್ಲಿ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ದಾವೂದ್ ಇಬ್ರಾಹಿಂ (Dawood Ibrahim) ಸಹೋದರಿ ಹಸೀನಾ ಪಾರ್ಕರ್ ಅವರ ನಿವಾಸದ ಮೇಲೂ ಇಡಿ ದಾಳಿ ನಡೆಸಿದೆ.
ಇದನ್ನೂ ಓದಿ: Nokia Smartphone: ಅಗ್ಗದ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ನೋಕಿಯಾ ಸ್ಮಾರ್ಟ್‌ಫೋನ್
ಮಹಾರಾಷ್ಟ್ರದ ರಾಜಧಾನಿಯಲ್ಲಿ ಸುಮಾರು ಹತ್ತು ಸ್ಥಳಗಳನ್ನು ಒಳಗೊಂಡಿದೆ ಮತ್ತು ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್‌ಗಳ ಅಡಿಯಲ್ಲಿ ಕ್ರಮವನ್ನು ಜರುಗಿಸಲಾಗುತ್ತಿದೆ.
ಅಕ್ರಮ ಹಣ ವರ್ಗಾವಣೆ ತಡೆ ಸಂಸ್ಥೆ ಮುಂಬೈ ಭೂಗತ ಜಗತ್ತಿನ ಹವಾಲಾ, ಸುಲಿಗೆ ಮತ್ತು ಅಕ್ರಮ ಆಸ್ತಿ ವ್ಯವಹಾರಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಹುಡುಕುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ವ್ಯವಹಾರಗಳಿಗೆ ಕೆಲವು ರಾಜಕೀಯ ಲಿಂಕ್‌ಗಳು ಸಹ ಏಜೆನ್ಸಿಯ ರಾಡಾರ್ ಅಡಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.