ನವದೆಹಲಿ: ಏವಿಯೇಶನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.


COMMERCIAL BREAK
SCROLL TO CONTINUE READING

ಬೋಯಿಂಗ್ ಮತ್ತು ಏರ್‌ಬಸ್‌ನಿಂದ 70,000 ಕೋಟಿ ರೂ.ಗೆ 111 ವಿಮಾನಗಳನ್ನು ಖರೀದಿಸುವುದು, ಲಾಭದಾಯಕ ಮಾರ್ಗಗಳನ್ನು ಮತ್ತು ಖಾಸಗಿ ವಿಮಾನಯಾನ ಸಂಸ್ಥೆಗಳಿಗೆ ವೇಳಾಪಟ್ಟಿಯನ್ನು ನೀಡುವುದು ಮತ್ತು ವಿದೇಶಿ ಹೂಡಿಕೆಯೊಂದಿಗೆ ತರಬೇತಿ ಸಂಸ್ಥೆಗಳನ್ನು ತೆರೆಯುವುದಕ್ಕೆ ಈ ಪ್ರಕರಣ ಸಂಬಂಧಿಸಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರನ್ನು ಕಳೆದ ವಾರ ಸಿಬಿಐ ಕರೆಸಿಕೊಂಡು ವಿಚಾರಣೆ ನಡೆಸಿತ್ತು. ಏರ್ ಇಂಡಿಯಾ ಹೊರತುಪಡಿಸಿ, ವಿದೇಶಿ ಖಾಸಗಿ ವಿಮಾನಯಾನ ಸಂಸ್ಥೆಗಳಿಗೆ ಲಾಭವಾಗುವ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಮೇಲೆ ಹಾಗೂ ದೀಪಕ್ ತಲ್ವಾರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪದ ಸಮನ್ಸ್ ಜಾರಿ ಮಾಡಿತ್ತು.


ವಿದೇಶಿ ವಿಮಾನಯಾನ ಸಂಸ್ಥೆಗಳ ಪರವಾಗಿ ಮತ್ತು ಏರ್ ಇಂಡಿಯಾವನ್ನು ಹೊರಗಿಡಲು ತಲ್ವಾರ್ ಅವರು ಪಟೇಲ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.


2004 ರಿಂದ 2011ರ ನಡುವೆ ನಾಗರಿಕ ವಿಮಾನಯಾನ ಸಚಿವರಾಗಿ ತಲ್ವಾರ್ ವಿರುದ್ಧ, ಇಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಪಟೇಲ್ ಹೆಸರನ್ನು ಸಹ ಉಲ್ಲೇಖಿಸಿದೆ.


ತಲ್ವಾರ್ ಅವರನ್ನು ಈ ವರ್ಷದ ಜನವರಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.


ಏತನ್ಮಧ್ಯೆ, ಪಿ ಚಿದಂಬರಂ ಮತ್ತು ಅವರ ಮಗ ಕಾರ್ತಿ ಅವರನ್ನೂ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ.