Money laundering case: ವಯನಾಡ್ ಸಂಸದೆ ಪ್ರಿಯಾಂಕಾ ವಾದ್ರಾರ ಪತಿ ಉದ್ಯಮಿ ರಾಬರ್ಟ್ ವಾದ್ರಾಗೆ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡುವ ಮೂಲಕ ಶಾಕ್ ನೀಡಿದೆ.
ಹರಿಯಾಣದ ಗುರುಗ್ರಾಮ್‌ನಲ್ಲಿ ಕಡಿಮೆ ಬೆಲೆಗೆ ಭೂಮಿ ಖರೀದಿಸಿ, ಅತಿಹೆಚ್ಚಿನ ಬೆಲೆಗೆ ಮಾರಾಟ ಮಾಡಿದ ಆರೋಪ ರಾಬರ್ಟ್ ವಾದ್ರಾ ಮೇಲಿದೆ. ಈ ಪ್ರಕರಣ ಸಂಬಂಧ ಈ ಮೊದಲು ಏಪ್ರಿಲ್ 8ರಂದು ಸಮನ್ಸ್ ನೀಡಲಾಗಿತ್ತು. ಅಂದು ವಿಚಾರಣೆಗೆ ಗೈರಾದ ಹಿನ್ನಲೆ ಇದೀಗ ಮತ್ತೊಂದು ಸಮನ್ಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: ಅಕ್ರಮ ಸಂಬಂಧ ಬಯಲು ಮಾಡಿದ ಮಗಳ ಬೆತ್ತಲೆ ವಿಡಿಯೋ ಮಾಡಿ ವೈರಲ್ ಮಾಡಿದ ತಾಯಿ!!
ಇಡಿ ಕಚೇರಿಗೆ ತೆರಳುವಾಗ ಈ ಬಗ್ಗೆ ಪ್ರತಿಕ್ರಿಯಿಸಿದ ರಾಬರ್ಟ್ ವಾದ್ರಾ, ಇಡಿ ಸಮನ್ಸ್ ಅನ್ನು ಬಿಜೆಪಿಯ ರಾಜಕೀಯ ದ್ವೇಷವೆಂದು ದೂರಿದ್ದಾರೆ. ನಾನು ಜನರ ಪರ ಧ್ವನಿ ಎತ್ತಿದಾಗಲೆಲ್ಲಾ ಅವರು ನನ್ನನ್ನು ನಿಗ್ರಹಿಸಲು ಪ್ರಯತ್ನಿಸುತ್ತಾರೆ. ನನ್ನಲ್ಲಿ ಮುಚ್ಚಿಡಲು ಏನೂ ಇಲ್ಲ. ಏನು ಕೇಳಿದರೂ ನಾನು ಅವರಿಗೆ ಉತ್ತರಿಸುತ್ತೇನೆʼ ಅಂತಾ ಹೇಳಿದ್ದಾರೆ.
2008ರ ಫೆಬ್ರವರಿ ತಿಂಗಳಿನಲ್ಲಿ ರಾಬರ್ಟ್ ವಾದ್ರಾರಿಗೆ ಸೇರಿದ ಸೈ ಲೈಟ್ ಹಾಸ್ಪಿಟಾಲಿಟಿ ಕಂಪನಿಯು ಗುರುಗ್ರಾಮ್‌ನ ಸೆಕ್ಟರ್ 83, ಶಿಕೊಪುರ, ಸಿಕಂದರ್‌ಪುರ, ಖೇದಿ ದೌಲಾ ಮತ್ತು ಸಿಹಿಯಲ್ಲಿ 7.5 ಕೋಟಿ ರೂ.ಗೆ ಭೂಮಿ ಖರೀದಿಸಿತ್ತು. ಈ ಭೂಮಿಯನ್ನ ಬರೋಬ್ಬರಿ 55 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು. ಇದು ಅಕ್ರಮ ಹಣ ವರ್ಗಾವಣೆ ಇರಬಹುದು ಎಂದು ಇಡಿ ಶಂಕಿಸಿದೆ.
ಇದನ್ನೂ ಓದಿ: ಚುನಾವಣೆಯಲ್ಲಿ ಶೇ.50ರಷ್ಟು ಮುಸ್ಲಿಂ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ: ಪ್ರಧಾನಿ ಮೋದಿ
ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ, ಹೇಳಿಕೆ ದಾಖಲಿಸುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ರಾಬರ್ಟ್ ವಾದ್ರಾ ಅವರು ಇಡಿ ಮುಂದೆ ಹಾಜರಾದ ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅವರ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









