ಚೆನ್ನೈ: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಸೋಲಿನ ನಂತರ ತಮಿಳುನಾಡು ಸಿಎಂ ಎದಪ್ಪಾಡಿ ಕೆ ಪಳನಿಸ್ವಾಮಿ ಇಂದು ರಾಜೀನಾಮೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಸಿಎಂ ಪಳನಿಸ್ವಾಮಿ(Edappadi K Palaniswami) ತಮ್ಮ ಕಾರ್ಯದರ್ಶಿಯ ಮೂಲಕ ಸೇಲಂನಿಂದ ರಾಜೀನಾಮೆ ಕಳುಹಿಸಿದ್ದಾರೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ರಾಜೀನಾಮೆ ಪತ್ರ ರಾಜ್ಯಪಾಲರ ಕೈ ತಲುಪಲಿದೆ ಎಂದು ಹೇಳಲಾಗುತ್ತಿದೆ.


ಡಿಎಂಕೆಯ ಎಂ.ಕೆ.ಸ್ಟಾಲಿನ್(MK Stalin) ನೇತೃತ್ವದ ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳಲು ರಾಜ್ಯಪಾಲರ ಕಚೇರಿಯಲ್ಲಿ ಪೂರ್ವಸಿದ್ಧತಾ ಕಾರ್ಯ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ 125 ಸ್ಥಾನಗಳನ್ನು ಗೆದ್ದರೆ, ಒ ಪನ್ನೀರ್ ಸೆಲ್ವಂ ಮತ್ತು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ 65 ಸ್ಥಾನಗಳನ್ನು ಗೆದ್ದಿದೆ.


ತಮಿಳುನಾಡಿನ ಹೊಸ ಸಿಎಂ(Chief Minister) ಆಗಿ ಅಧಿಕಾರ ವಹಿಸಿಕೊಳ್ಳಲಿರುವ ಎಂ.ಕೆ.ಸ್ಟಾಲಿನ್ ಅವರಿಗೆ ನಾನು ಶುಭ ಕೋರುತ್ತೇನೆ', ಎಂದು ಪಳನಿಸ್ವಾಮಿ ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.