Harassment:ಪತ್ರಕರ್ತರು ಸೇರಿ 8 ಮಂದಿ ಬಂಧನ: ಅರೆನಗ್ನಗೊಳಿಸಿ ಕಿರುಕುಳ ನೀಡಿದ ಪೊಲೀಸರು!
ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 2ರಂದು ಈ ಘಟನೆ ನಡೆದಿದ್ದು, ಫೋಟೋಗಳು ವೈರಲ್ ಆಗುತ್ತಿದ್ದಂತೆ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಪ್ರದೇಶ : ಇಬ್ಬರು ಪತ್ರಕರ್ತರು ಸೇರಿದಂತೆ 8 ಮಂದಿಯನ್ನು ಬಂಧಿಸಿದ ಪೊಲೀಸರು, ಅವರನ್ನು ಅರೆ ನಗ್ನಗೊಳಿಸಿ ಠಾಣೆಯಲ್ಲಿ ಇರಿಸಿಕೊಂಡು ಕಿರುಕುಳ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಘಟನೆ ಕುರಿತು ಪತ್ರಕರ್ತನೋರ್ವ ಮಾಹಿತಿ ನೀಡಿದ್ದಾನೆ. ಮಧ್ಯಪ್ರದೇಶ (Madhypradesh)ದ ಸಿಧಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 2ರಂದು ಈ ಘಟನೆ ನಡೆದಿದ್ದು, ಫೋಟೋಗಳು ವೈರಲ್ (Viral) ಆಗುತ್ತಿದ್ದಂತೆ ವಿಚಾರ ಬೆಳಕಿಗೆ ಬಂದಿದೆ.
ಇದನ್ನು ಓದಿ: ಹಿಂದೂ-ಮುಸ್ಲಿಂ ಸಾಮರಸ್ಯದ ಬೆಂಗಳೂರು ಕರಗ ಉತ್ಸವಕ್ಕೆ ವಿದ್ಯುಕ್ತ ಚಾಲನೆ
ಏನಿದು ಘಟನೆ? :
ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ನಿಂದಿಸಿರುವ ಆರೋಪದ ಮೇಲೆ ರಂಗಭೂಮಿ ಕಲಾವಿದ ನೀರಜ್ ಕುಂದರ್ ಎಂಬಾತನನ್ನು ಇಲ್ಲಿನ ಕೊತ್ವಾಲಿ ಪೊಲೀಸರು ಬಂಧಿಸಿದ್ದರು. ನೀರಜ್ ಕುಂದರ್ ಬಂಧನವನ್ನು ಖಂಡಿಸಿ, ಇತರ ರಂಗಭೂಮಿ ಕಲಾವಿದರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟಿಸಿದ್ದರು. ಈ ಪ್ರತಿಭಟನೆಯನ್ನು ವರದಿ ಮಾಡಲು ಸ್ಥಳೀಯ ಚಾನೆಲ್ನಲ್ಲಿ ಅರೆಕಾಲಿಕ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಜೊತೆಗೆ ತನ್ನದೇ ಯುಟ್ಯೂಬ್ ಚಾನೆಲ್ ಹೊಂದಿರುವ ಕನಿಷ್ಕ್ ತಿವಾರಿ ತಮ್ಮ ಕ್ಯಾಮೆರಾಮೆನ್ನೊಂದಿಗೆ ತೆರಳಿದ್ದರು. ಆದರೆ ಘಟನೆಯ ವರದಿ ಮಾಡಲು ಮುಂದಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರು ಮತ್ತು ಪತ್ರಕರ್ತರನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ, ಅವರನ್ನು ಸುಮಾರು 18 ಗಂಟೆಗಳ ಕಾಲ ಲಾಕ್ಅಪ್ನಲ್ಲಿ ಇರಿಸಲಾಗಿದ್ದು, ಥಳಿಸಿ, ಅರೆ ನಗ್ನವಾಗಿಸಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದ್ದು, ಒಂದು ದಿನದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಇದನ್ನು ಓದಿ: Budh Gochar: ವೃತ್ತಿ-ವ್ಯವಹಾರದಲ್ಲಿ ಪ್ರಗತಿಶೀಲ ಗ್ರಹ ಸಂಚಾರ, ಇದು ನಿಮಗೆ ಶುಭವೋ ಅಶುಭವೋ
ಬೆತ್ತಲೆ ಮೆರವಣಿಗೆಯ ಬೆದರಿಕೆ : ಇನ್ನು ಈ ಸಂಬಂಧ ಕನಿಷ್ಕ್ ಮಾತನಾಡಿದ್ದು, 'ಪೊಲೀಸ್ ಠಾಣೆಯ ಉಸ್ತುವಾರಿಯಾಗಿರುವ ಅಭಿಷೇಕ್ ಸಿಂಗ್ ಪರಿಹಾರ್ ಅವರು ಶಾಸಕ ಕೇದಾರ್ನಾಥ್ ಶುಕ್ಲಾ ವಿರುದ್ಧ ವರದಿ ಮಾಡಿದರೆ ನನ್ನನ್ನು ಮತ್ತು ಇತರರನ್ನು ನಗರದಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ" ಎಂದರು.
ಆದರೆ ಪೊಲೀಸ್ ವರಿಷ್ಠಾಧಿಕಾರಿ ಮುಖೇಶ್ ಕುಮಾರ್ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 'ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದು, ಪೊಲೀಸರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಬಾರದು ಎಂದು ಮನವಿ ಮಾಡಿದ್ದಾರೆ. ಆದರೂ ಅವರು ಕೇಳಲಿಲ್ಲ. ಆದ್ದರಿಂದ ತಡರಾತ್ರಿ ಅವರನ್ನು ಬಂಧಿಸಲಾಗಿದೆ. ವೈರಲ್ ಆಗಿರುವ ಫೋಟೋ ಬಗ್ಗೆಯೂ ತಿಳಿದಿದ್ದು, ಆ ಫೋಟೋ ಯಾವಾಗ ತೆಗೆಯಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.