ನವದೆಹಲಿ: ನಿನ್ನೆ ದಿನ ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಇಂದು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಹಿಂದೆ ಘೋಷಿಸಿದಂತೆ ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಸಮ್ಮುಖದಲ್ಲಿ ಶಿಂಧೆ ಅವರು ರಾಜ್ಯದ ಉನ್ನತ ಹುದ್ದೆಗೆ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ-ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ
ದಿವಂಗತ ಶಿವಸೇನಾ ನಾಯಕರಾದ ಬಾಳ್ ಠಾಕ್ರೆ ಮತ್ತು ಆನಂದ್ ದಿಘೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಶಿಂಧೆ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಅವರ ಬೆಂಬಲಿಗರು ಘೋಷಣೆಗಳನ್ನು ಕೂಗಿದರು.
महाराष्ट्र राज्याचे मुख्यमंत्री म्हणून @mieknathshinde यांनी शपथ घेतली. राज्यपाल @BSKoshyari यांनी श्री. शिंदे यांना मुख्यमंत्री पदाची शपथ दिली. pic.twitter.com/JI38n19Bzg
— MAHARASHTRA DGIPR (@MahaDGIPR) June 30, 2022
ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಈ ಹಿಂದೆ ಫಡ್ನವಿಸ್ ಮುಖ್ಯಮಂತ್ರಿಯಾಗಲಿದ್ದು, ಶಿಂಧೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಊಹಿಸಲಾಗಿತ್ತು.
ಇದನ್ನೂ ಓದಿ-Maharashtra Political Crisis : ಮಹಾ ನೂತನ ಸಿಎಂ ಆಗಿ ಫಡ್ನವಿಸ್, ಉಪಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ!
ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ಎಂವಿಎ ಮೈತ್ರಿ ವಿರುದ್ಧದ ಸದನ ಪರೀಕ್ಷೆಗೆ ಮುಂಚಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆಗಳು ನಡೆದಿವೆ.ಏಕನಾಥ್ ಶಿಂಧೆ ಅವರು ಶಿವಸೇನೆಯ ಬೆಂಬಲವನ್ನು ಹೊಂದಿದ್ದರಿಂದಾಗಿ ಈಗ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬಂದಿದೆ.
ಇದಕ್ಕೂ ಮುನ್ನ ಫಡ್ನವಿಸ್ ಅವರು ಸರ್ಕಾರದಲ್ಲಿ ಇರುವುದಿಲ್ಲ ಎಂದು ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು, ಫಡ್ನವಿಸ್ ಅವರು ಶಿಂಧೆ ನೇತೃತ್ವದ ಹೊಸ ಮಹಾರಾಷ್ಟ್ರ ಸಂಪುಟದ ಭಾಗವಾಗಲಿದ್ದಾರೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.