ಚುನಾವಣಾ ರ್ಯಾಲಿ ಹಾಗೂ ರೋಡ್ ಷೋ ನಿಷೇಧಿಸಿದ ಚುನಾವಣಾ ಆಯೋಗ

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೊರೊನಾ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ರೋಡ್ ಶೋ ಮತ್ತು ವಾಹನ ರ್ಯಾಲಿ ಮತ್ತು 500 ಕ್ಕೂ ಹೆಚ್ಚು ಜನರನ್ನು ಹೊಂದಿರುವ ಯಾವುದೇ ಸಾರ್ವಜನಿಕ ಸಭೆಯನ್ನು ಅನುಮತಿಸುವುದಿಲ್ಲ ಎಂದು ಹೇಳಿದೆ. ಈ ಆದೇಶಗಳು ಗುರುವಾರ ಸಂಜೆ 7 ರಿಂದ ಜಾರಿಗೆ ಬರಲಿವೆ.

Last Updated : Apr 22, 2021, 10:37 PM IST
ಚುನಾವಣಾ ರ್ಯಾಲಿ ಹಾಗೂ ರೋಡ್ ಷೋ ನಿಷೇಧಿಸಿದ ಚುನಾವಣಾ ಆಯೋಗ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೊರೊನಾ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ರೋಡ್ ಶೋ ಮತ್ತು ವಾಹನ ರ್ಯಾಲಿ ಮತ್ತು 500 ಕ್ಕೂ ಹೆಚ್ಚು ಜನರನ್ನು ಹೊಂದಿರುವ ಯಾವುದೇ ಸಾರ್ವಜನಿಕ ಸಭೆಯನ್ನು ಅನುಮತಿಸುವುದಿಲ್ಲ ಎಂದು ಹೇಳಿದೆ. ಈ ಆದೇಶಗಳು ಗುರುವಾರ ಸಂಜೆ 7 ರಿಂದ ಜಾರಿಗೆ ಬರಲಿವೆ.

ಸಾರ್ವಜನಿಕ ಸಭೆಗಳಲ್ಲಿ ಅನೇಕ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ನಿಗದಿತ ಸುರಕ್ಷತಾ ಮಾನದಂಡಗಳನ್ನು ಅನುಸರಿಸುತ್ತಿಲ್ಲ ಎಂದು ಆಯೋಗದ ಆದೇಶ ಹೇಳಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜೀಗೆ ನೋಟಿಸ್ ಜಾರಿ ಮಾಡಿದ ಚುನಾವಣಾ ಆಯೋಗ

ಹಿಂದಿನ ದಿನ, ಕಲ್ಕತ್ತಾ ಹೈಕೋರ್ಟ್ ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿತು.ಇಸಿ (Election Commission) ಕಾರ್ಯನಿರ್ವಹಿಸದಿದ್ದರೆ ನ್ಯಾಯಾಲಯವು ನಿರ್ಧಾರ ತೆಗೆದುಕೊಳ್ಳುತ್ತದೆ "ಎಂದು ಹೇಳಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಚಾರ ಸೇರಿದಂತೆ ಕೋವಿಡ್ -19 ಆರೋಗ್ಯ ಸುರಕ್ಷತಾ ಮಾನದಂಡಗಳನ್ನು ಜಾರಿಗೊಳಿಸಿದ ಬಗ್ಗೆ ನ್ಯಾಯಾಲಯವು ಭಾರತದ ಚುನಾವಣಾ ಆಯೋಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.

ಇದನ್ನೂ ಓದಿ: Assam Election 2021: ಬಿಜೆಪಿ ಶಾಸಕರ ಕಾರಿನೊಳಗೆ ಇವಿಎಂ, 4 ಅಧಿಕಾರಿಗಳು ಸಸ್ಪೆಂಡ್

ಚುನಾವಣೆಯ ಸಮಯದಲ್ಲಿ ಕೋವಿಡ್ ಪ್ರೋಟೋಕಾಲ್ ಜಾರಿಗೊಳಿಸಬೇಕೆಂದು ಮೂರು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿ ಬಿ ಎನ್ ರಾಧಾಕೃಷ್ಣನ್ ಅವರ ನೇತೃತ್ವದಲ್ಲಿ ಕಲ್ಕತ್ತಾ ಹೈಕೋರ್ಟ್ ಪೀಠವು ಸುತ್ತೋಲೆಗಳನ್ನು ನೀಡುವುದು ಮತ್ತು ಕೋವಿಡ್ ಸುರಕ್ಷತೆ ಕುರಿತು ಸಭೆ ನಡೆಸುವುದು ಸಾಕಾಗುವುದಿಲ್ಲ ಎಂದು ಹೇಳಿದರು. ಮಾನದಂಡಗಳನ್ನು ಜಾರಿಗೊಳಿಸಲು ಕೈಗೊಂಡ ಕ್ರಮಗಳ ಕುರಿತು ನ್ಯಾಯಾಲಯವು ಶುಕ್ರವಾರದೊಳಗೆ ಅಫಿಡವಿಟ್ ಕೋರಿತು.

ಇದನ್ನೂ ಓದಿ: ಕೇವಲ ಎರಡೇ ಪದದಲ್ಲಿ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಹೇಳಿದ್ದೇನು?

ವಿಶೇಷವೆಂದರೆ, ರಾಜ್ಯವು ಏಪ್ರಿಲ್ 26 ಮತ್ತು 29 ರಂದು ಮತದಾನದ ಎರಡು ಹಂತಗಳಿಗೆ ಸಾಕ್ಷಿಯಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

More Stories

Trending News