/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ (EC) ಮತದಾನದ ದಿನಾಂಕವನ್ನು ಬದಲಾಯಿಸಿದೆ. ಈಗ ಫೆಬ್ರವರಿ 14 ರ ಬದಲಿಗೆ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮತದಾನದ ದಿನಾಂಕ ಬದಲಾವಣೆಗೆ ಸಂಬಂಧಿಸಿದಂತೆ ಹಲವು ರಾಜಕೀಯ ಪಕ್ಷಗಳಿಂದ ಪತ್ರ ಬರೆದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ. ಈ ಕುರಿತು ಚರ್ಚಿಸಲು ಚುನಾವಣಾ ಆಯೋಗ ಇಂದು ಸಭೆ ನಡೆಸಿತ್ತು.

ಮತದಾನದ ದಿನಾಂಕ ಬದಲಾಯಿಸಿದ ಚುನಾವಣಾ ಆಯೋಗ

ರವಿದಾಸ್ ಕಾರಣಕ್ಕಾಗಿ ಪಂಜಾಬ್ ವಿಧಾನಸಭಾ ಚುನಾವಣೆ(Punjab Assembly Election)ಯ ಮತದಾನದ ದಿನಾಂಕವನ್ನು ಫೆಬ್ರವರಿ 14 ಎಂದು ಇಡಬಾರದು ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ (PLC) ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಜಯಂತಿ, ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ (SC) ಜನರು ರಾಜ್ಯದ ಹೊರಗಿರುತ್ತಾರೆ. ಅವರು ಯುಪಿಯ ವಾರಣಾಸಿಗೆ ಹೋಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಆ ಜನರು ಮತದಾನ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ಮತದಾನದ ಹಕ್ಕಿನಿಂದ ವಂಚಿತರಾಗುತ್ತಾರೆ.

ಇದನ್ನೂ ಓದಿ : ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಕೋರ್ಟ್ ಗೆ ಕೇಂದ್ರದ ಸ್ಪಷ್ಟನೆ

ರಾಜಕೀಯ ಪಕ್ಷಗಳ ಬೇಡಿಕೆ ಏನು?

ಬಿಜೆಪಿ, ಕಾಂಗ್ರೆಸ್ ಮತ್ತು ಪಂಜಾಬ್ ಲೋಕ ಕಾಂಗ್ರೆಸ್(BJP, Congress, PLC) ಪಂಜಾಬ್ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕವನ್ನು ಫೆಬ್ರವರಿ 14 ರ ಬದಲಿಗೆ ಫೆಬ್ರವರಿ 16 ಕ್ಕೆ ಬದಲಾಯಿಸಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದವು. ಪರಿಶಿಷ್ಟ ಜಾತಿಯ ಜನರು ಮತದಾನದಿಂದ ವಂಚಿತರಾಗಬಾರದು.

ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ

ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ. ಈ ಹಿಂದೆ ಫೆಬ್ರವರಿ 14 ರಂದು ಮತದಾನ(Voting) ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಘೋಷಿಸಿತ್ತು. ಆದರೆ, ಈಗ ಮತದಾನದ ದಿನಾಂಕವನ್ನು ಫೆಬ್ರವರಿ 16ಕ್ಕೆ ಬದಲಾಯಿಸಲಾಗಿದೆ. ಜನವರಿ 8 ರಂದು ಚುನಾವಣಾ ಆಯೋಗವು ಪಂಜಾಬ್ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿತ್ತು.

ಇದನ್ನೂ ಓದಿ : Trending News: Twitter ನಲ್ಲಿ #CancelBoardExam2022 ಟ್ರೆಂಡಾಗುತ್ತಿರುವುದೇಕೆ? CBSE Class-10th,12th ವಿದ್ಯಾರ್ಥಿಗಳು ಓದಲೇಬೇಕಾದ ಸುದ್ದಿ ಇದು

ಪ್ರಸ್ತುತ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ(Congress Govt)ವಿದೆ ಎಂಬುದು ಗಮನಿಸಬೇಕಾದ ಸಂಗತಿ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಅಕಾಲಿದಳ ಮತ್ತು ಬಿಜೆಪಿ-ಪಂಜಾಬ್ ಲೋಕ ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಡುವ ಚಿಂತನೆ ನಡೆದಿದೆ. ಚುನಾವಣೆ ಗೆಲ್ಲಲು ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಬಲ ನೀಡಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Election Commission changes punjab assembly election voting date to 20 february from 14 after many political parties request
News Source: 
Home Title: 

ಪಂಜಾಬ್ ಚುನಾವಣಾ ಮತದಾನದ ದಿನಾಂಕ ಬದಲಿಸಿದ ಚುನಾವಣಾ ಆಯೋಗ!

Punjab Election 2022 : ಪಂಜಾಬ್ ಚುನಾವಣಾ ಮತದಾನದ ದಿನಾಂಕ ಬದಲಿಸಿದ ಚುನಾವಣಾ ಆಯೋಗ!
Yes
Is Blog?: 
No
Tags: 
Facebook Instant Article: 
Yes
Highlights: 

ರವಿದಾಸ್ ಜಯಂತಿ ಹಿನ್ನೆಲೆ ಮತದಾನದ ದಿನಾಂಕ ಬದಲಾವಣೆ

ರಾಜಕೀಯ ಪಕ್ಷಗಳ ಬೇಡಿಕೆಯನ್ನು ಈಡೇರಿಸಿದೆ ಚುನಾವಣಾ ಆಯೋಗ 

ಯಾರೂ ಮತದಾನದಿಂದ ವಂಚಿತರಾಗಬಾರದು - ರಾಜಕೀಯ ಪಕ್ಷಗಳು

Mobile Title: 
ಪಂಜಾಬ್ ಚುನಾವಣಾ ಮತದಾನದ ದಿನಾಂಕ ಬದಲಿಸಿದ ಚುನಾವಣಾ ಆಯೋಗ!
Channabasava A Kashinakunti
Publish Later: 
No
Publish At: 
Monday, January 17, 2022 - 15:16
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
3
Is Breaking News: 
No