Loksabha Election :17 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ 106 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಿಸಿ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ತೆಲಂಗಾಣದಲ್ಲಿ ಬಿಸಿ ಅಲೆಯ ಪರಿಸ್ಥಿತಿಗಳನ್ನು ಪರಿಗಣಿಸಿ , ಭಾರತೀಯ ಚುನಾವಣಾ ಆಯೋಗವು ಮೇ 13 ರಂದು ರಾಜ್ಯದಲ್ಲಿ ನಡೆಯುವ ಲೋಕಸಭೆ ಚುನಾವಣೆಯ ಮತದಾನದ ಸಮಯವನ್ನು ವಿಸ್ತರಿಸಿದೆ.


COMMERCIAL BREAK
SCROLL TO CONTINUE READING

17 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ 106 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಿಸಿ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.  ಆದರೆ ಇದರ ಹಿಂದಿನ ಮಾಹಿತಿ ಪ್ರಕಾರ  ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಾಗಿ ತಿಳಿಸಲಾಗಿತ್ತು. ಆದರೆ ಈಗ ಮತದಾನವು ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳುವ ಬದಲು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದೆ. 


ಇದನ್ನು ಓದಿ : ಭಾರತದಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ 134 ವಾಕ್ ಸ್ವಾತಂತ್ರ್ಯ ಉಲ್ಲಂಘನೆಯ ದಾಖಲೆ


ಐದು ಲೋಕಸಭಾ ಕ್ಷೇತ್ರಗಳಲ್ಲಿ ಎಡಪಂಥೀಯ ಉಗ್ರಗಾಮಿತ್ವ (ಎಲ್‌ಡಬ್ಲ್ಯುಇ) ಎಂದು ಆರೋಪಿಸಲಾಗಿರುವ 13 ಕ್ಷೇತ್ರಗಳಲ್ಲಿ ಮತದಾನ ಸಂಜೆ 4 ಗಂಟೆಗೆ ಮುಕ್ತಾಯವಾಗಲಿದೆ. ನೆರೆಯ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದರಿಂದ ತೆಲಂಗಾಣದಲ್ಲಿ ಸಂಜೆ 5 ಗಂಟೆಯವರೆಗೆ ಮಾತ್ರ ಮತದಾನ ನಡೆಸುವ ಚುನಾವಣಾ ಆಯೋಗದ ನಿರ್ಧಾರ ತೆಗೆದುಕೊಂಡ ಪರಿಣಾಮ  ರಾಜಕೀಯ ಪಕ್ಷಗಳಿಂದ ತೀವ್ರ ಟೀಕೆಗೆ ಒಳಗಾಯಿತು.


ಇದಾಗಿ ತೆಲಂಗಾಣ ಮುಖ್ಯ ಚುನಾವಣಾಧಿಕಾರಿ  ರಾಜ್ಯದಲ್ಲಿ ಬೇಸಿಗೆಯ ಪ್ರಚಲಿತ ಪರಿಸ್ಥಿತಿ ಮತ್ತು ಬಿಸಿಗಾಳಿಯ ಪರಿಸ್ಥಿತಿ ಮತ್ತು ಮತದಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತದಾನದ ಸಮಯವನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದರು. 


ಇದನ್ನು ಓದಿ : ಮಧ್ಯಾಹ್ನ ಊಟದ ಬಳಿಕ ಈ ಹಣ್ಣನ್ನು ಸೇವಿಸಿ ಸಾಕು: ಸೊಂಟದ ಸುತ್ತ ಕಾಡುವ ಹಠಮಾರಿ ಬೊಜ್ಜು 5 ದಿನದಲ್ಲಿ ಕರಗಿ ಹೋಗುತ್ತೆ!


ತೆಲಂಗಾಣದಲ್ಲಿ ತೀವ್ರವಾದ ಬಿಸಿಗಾಳಿ ಪರಿಸ್ಥಿತಿಗಳು ಚಾಲ್ತಿಯಲ್ಲಿರುವುದರಿಂದ ಕೆಲವು ಸ್ಥಳಗಳಲ್ಲಿ 46 ಡಿಗ್ರಿ ಸೆಲ್ಸಿಯಸ್ ದಾಟಿದೆ, ಇದು ಮತದಾನದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕವಿದೆ. ಡಿಸೆಂಬರ್ 2023 ರಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ತೆಲಂಗಾಣದಲ್ಲಿ 71.34% ಮತದಾನವಾಗಿದೆ. 2018 ರ ಅಸೆಂಬ್ಲಿ ಚುನಾವಣೆಯಲ್ಲಿ, 73.73% ಮತದಾರರು ಮತ ಚಲಾಯಿಸಿದ್ದರು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ.62.11ಕ್ಕೆ ಕುಸಿದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.