ಚುನಾವಣಾ ಪ್ರಕ್ರಿಯೆ ಬಲಪಡಿಸಲು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಆಹ್ವಾನ

ಚುನಾವಣಾ ವ್ಯವಸ್ಥೆಯಲ್ಲಿನ ನ್ಯೂನ್ಯತೆಗಳನ್ನು ಈಗಾಗಲೇ ಇರುವ ಕಾನೂನು ಚೌಕಟ್ಟಿನ ಅಡಿಯಲ್ಲಿ ಪರಿಹರಿಸುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಆಯೋಗ ಹೊಂದಿದೆ.

Written by - Manjunath Naragund | Last Updated : Mar 12, 2025, 02:34 PM IST
  • ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಆಯೋಗ ಹೊಂದಿದೆ
  • ಎಲ್ಲಾ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ಸದಸ್ಯರೊಂದಿಗೆ ಸೂಕ್ತ ಸಮಯದಲ್ಲಿ ಸಂವಾದ ನಡೆಸುವಂತೆಯೂ ಆಯೋಗ ಪ್ರಸ್ತಾಪಿಸಿದೆ
  • ರಾಷ್ಟ್ರೀಯ ಮತ್ತು ರಾಜಕೀಯ ಪಕ್ಷಗಳಿಗೆ ಚುನಾವಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಮುಕ್ತ ಸಲಹೆ ನೀಡಲು ಸೂಚಿಸಿದೆ.
ಚುನಾವಣಾ ಪ್ರಕ್ರಿಯೆ ಬಲಪಡಿಸಲು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಆಹ್ವಾನ

ನವದೆಹಲಿ: ದೇಶದ ಚುನಾವಣಾ ಪ್ರಕ್ರಿಯೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳಿಗೆ ಸಲಹೆ ಸೂಚನೆ ನೀಡಲು ಚುನಾವಣಾ ಆಯೋಗ ಮನವಿ ಮಾಡಿದೆ.

Add Zee News as a Preferred Source

ಈ ಕುರಿತಾಗಿ ಚುನಾವಣಾ ಆಯೋಗವು ಸೋಮವಾರದಂದು ಅಧಿಸೂಚನೆ ಹೊರಡಿಸಿ ಏಪ್ರಿಲ್ 30 ಒಳಗೆ ಎಲ್ಲಾ ರಾಷ್ಟ್ರೀಯ ಮತ್ತು ರಾಜಕೀಯ ಪಕ್ಷಗಳಿಗೆ ಚುನಾವಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಮುಕ್ತ ಸಲಹೆ ನೀಡಲು ಸೂಚಿಸಿದೆ.

ಚುನಾವಣಾ ವ್ಯವಸ್ಥೆಯಲ್ಲಿನ ನ್ಯೂನ್ಯತೆಗಳನ್ನು ಈಗಾಗಲೇ ಇರುವ ಕಾನೂನು ಚೌಕಟ್ಟಿನ ಅಡಿಯಲ್ಲಿ ಪರಿಹರಿಸುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಆಯೋಗ ಹೊಂದಿದೆ.ಈ ಹಿನ್ನೆಲೆಯಲ್ಲಿ ಈಗ ಚುನಾವಣಾ ಪ್ರಕ್ರಿಯೆಯನ್ನು ಸುಧಾರಿಸಲು ಲಿಖಿತ ಸಲಹೆಗಳನ್ನು ಆಹ್ವಾನಿಸುವುದರ ಜೊತೆಗೆ, ಎಲ್ಲಾ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ಸದಸ್ಯರೊಂದಿಗೆ ಸೂಕ್ತ ಸಮಯದಲ್ಲಿ ಸಂವಾದ ನಡೆಸುವಂತೆಯೂ ಆಯೋಗ ಪ್ರಸ್ತಾಪಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಎಣ್ಣೆ ದರ ಹೆಚ್ಚಳ ಮಾಡಲು ಅಬಕಾರಿ ಇಲಾಖೆ ಚಿಂತನೆ

ಕಳೆದ ವಾರ ನಡೆದ ಚುನಾವಣಾ ಆಯೋಗದ ಸಮಾವೇಶದಲ್ಲಿ, ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಸಿಇಒಗಳು, ಡಿಇಒಗಳು ಮತ್ತು ಇಆರ್‌ಒಗಳಿಗೆ ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಂವಹನ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಲ್ಲ.. ಈ ಇಬ್ಬರು ಯುವ ಆಟಗಾರರಿಗೆ ಟೀಂ ಇಂಡಿಯಾ ಬಾಗಿಲು ಬಂದ್!‌?   

ಈ ರೀತಿ ಸ್ವೀಕರಿಸಿದ ಯಾವುದೇ ಸಲಹೆಗಳನ್ನು ಈಗಾಗಲೇ ಜಾರಿಯಲ್ಲಿರುವ ಕಾನೂನು ಚೌಕಟ್ಟಿನೊಳಗೆ ಈಗಾಗಲೇ ಇರುವ ಕಾನೂನುಗಳಿಗೆ ಯಾವುದೇ ರೀತಿಯಲ್ಲಿ ತೊಡಕಾಗದಂತೆ ಕಟ್ಟುನಿಟ್ಟಾಗಿ ಪರಿಹರಿಸಲು ಯೋಜನೆ ಹಾಕಿಕೊಂಡಿದ್ದು, ಮಾರ್ಚ್ 31, 2025 ರೊಳಗೆ ಆಯೋಗಕ್ಕೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಲು ಚುನಾವಣಾ ಆಯೋಗದ ಮುಖ್ಯಸ್ಥರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

 

About the Author

Trending News