ನವದೆಹಲಿ: ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ 5 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ (Assembly Election) ದಿನಾಂಕಗಳನ್ನು ಇಂದು ಸಂಜೆ ಪ್ರಕಟಿಸುವ ಸಾಧ್ಯತೆಯಿದೆ.  ಚುನಾವಣಾ ಆಯೋಗ (Election commission) ಸಂಜೆ 4: 30 ಕ್ಕೆ ಸುದ್ದಿಗೋಷ್ಟಿ ನಡೆಸಲಿದೆ. ಸುದ್ದಿಗೋಷ್ಟಿಯಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.  ಪಶ್ಚಿಮ ಬಂಗಾಳದ (West Bengal) ಹೊರತಾಗಿ, ಈ ವರ್ಷ ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಚುನಾವಣೆ ನಡೆಯಲಿದೆ.


COMMERCIAL BREAK
SCROLL TO CONTINUE READING

ಮೇ-ಜೂನ್‌ನಲ್ಲಿ ಕೊನೆಗೊಳ್ಳುವ ರಾಜ್ಯ ಸರ್ಕಾರಗಳ ಅಧಿಕಾರಾವಧಿ : 
ಮಮತಾ ಬ್ಯಾನರ್ಜಿ (Mamtha Banarjee) ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ಅವಧಿ ಮೇ 30 ಕ್ಕೆ ಕೊನೆಗೊಳ್ಳುತ್ತದೆ. ಪಶ್ಚಿಮ ಬಂಗಾಳದ ಹೊರತಾಗಿ, ತಮಿಳುನಾಡು (Tamilnadu), ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ರಾಜ್ಯ ಸರ್ಕಾರಗಳ ಅಧಿಕಾರಾವಧಿ ಮೇ ಮತ್ತು ಜೂನ್‌ನಲ್ಲಿ ಕೊನೆಗೊಳ್ಳುತ್ತಿದೆ. ಪುದುಚೇರಿಯಲ್ಲಿ (Puducherry) ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ವಿಫಲರಾದ ನಂತರ ವಿ.ನಾರಾಯಣಸಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮೂಲಕ ಅಲ್ಲಿ  ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನಗೊಂಡಿತು.  


ಇದನ್ನೂ ಓದಿ : Balakot Air Strike: ಪಾಕಿಸ್ತಾನದ ಎದೆ ನಡುಗಿಸಿದ್ದ ಆ ದಾಳಿಗೆ ಇವತ್ತು ಎರಡು ವರ್ಷ..!


ಮತಕೇಂದ್ರಗಳ ಸಂಖ್ಯೆಯಲ್ಲಿ ಹೆಚ್ಚಳ ಸಾಧ್ಯತೆ : 
ಕೊರೊನಾವೈರಸ್ (Coronavirus)ಸಾಂಕ್ರಾಮಿಕದ ನಡುವೆ, ಮೊದಲ ಬಾರಿಗೆ ಅನೇಕ ರಾಜ್ಯಗಳಲ್ಲಿ ಚುನಾವಣೆಗಳು (Election) ಏಕಕಾಲದಲ್ಲಿ ನಡೆಯಲಿವೆ. ಸಾಂಕ್ರಾಮಿಕ ಸ್ಥಿತಿಯನ್ನು ಗಮನಿಸಿದರೆ, ಈ ರಾಜ್ಯಗಳಲ್ಲಿ ಮತಕೇಂದ್ರಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿಂದೆ ಚುನಾವಣಾ ಆಯೋಗವು (Election commission) ಕಳೆದ ವರ್ಷ ಅಕ್ಟೋಬರ್-ನವೆಂಬರ್ ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆದಿತ್ತು. ಆ ಸಂದರ್ಭದಲ್ಲಿ ಕೂಡಾ, ಸಾಮಾಜಿಕ ಅಂತರವನ್ನು (Social distancing) ಅನುಸರಿಸಿ ಮತದಾನ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿತ್ತು.


ಬಂಗಾಳದಲ್ಲಿ ಟಿಎಂಸಿಗೆ ಬಿಜೆಪಿ ಪ್ರತಿಸ್ಪರ್ಧಿ: 
ಪಶ್ಚಿಮ ಬಂಗಾಳದಲ್ಲಿ (West Bengal) ದಶಕಗಳ ನಂತರ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಬಿಜೆಪಿ (BJP) ಗೆದ್ದುಕೊಂಡಿತು. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಗೆ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿತ್ತು.  ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ (TMC) 22 ಸ್ಥಾನಗಳನ್ನು ಗೆದ್ದುಕೊಂಡಿತ್ತು.  


ಇದನ್ನೂ ಓದಿ : ಮುಖೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಸಾಮಗ್ರಿ ಹೊತ್ತಿದ್ದ ವಾಹನ ಪತ್ತೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.