ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಚುನಾವಣಾ ಆಯೋಗ, ಚುನಾವಣಾ ಸಿದ್ಧತೆ ಬಗ್ಗೆ ಪರಿಶೀಲನೆ

2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ(Maharashtra Assembly Elections 2019) ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ತಂಡ ಮಂಗಳವಾರ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ. ತಂಡವು ಮುಖ್ಯ ಚುನಾವಣಾ ಆಯುಕ್ತರು ಮತ್ತು 2 ಚುನಾವಣಾ ಆಯುಕ್ತರನ್ನು ಒಳಗೊಂಡಿರುತ್ತದೆ.

Last Updated : Sep 17, 2019, 10:27 AM IST
ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಚುನಾವಣಾ ಆಯೋಗ, ಚುನಾವಣಾ ಸಿದ್ಧತೆ ಬಗ್ಗೆ ಪರಿಶೀಲನೆ title=
Representational Image

ನವದೆಹಲಿ: 2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ(Maharashtra Assembly Elections 2019) ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ತಂಡ ಮಂಗಳವಾರ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ. ತಂಡವು ಮುಖ್ಯ ಚುನಾವಣಾ ಆಯುಕ್ತರು ಮತ್ತು 2 ಚುನಾವಣಾ ಆಯುಕ್ತರನ್ನು ಒಳಗೊಂಡಿರುತ್ತದೆ.  ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಚುನಾವಣಾ ಆಯೋಗದ ಇಂದು ಭೇಟಿ ನೀಡುತ್ತಿದೆ.

ಮಹಾರಾಷ್ಟ್ರ (Maharashtra) ಮತ್ತು ಹರಿಯಾಣ (Haryana) ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಸೆಪ್ಟೆಂಬರ್ 12 ರಂದು ಮಹತ್ವದ ಸಭೆ ಕರೆದಿತ್ತು. ಸಭೆಯ ಬಳಿಕ ಲಭ್ಯವಾದ ಮಾಹಿತಿಯ ಪ್ರಕಾರ, ಆಯೋಗವು ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಆಯೋಗದ ತಂಡದ ವರದಿಯನ್ನು ಸಭೆಯಲ್ಲಿ ಚರ್ಚಿಸಿತ್ತು. ಈ ಸಮಯದಲ್ಲಿ, ಆಯೋಗವು ಮತದಾರರ ಪಟ್ಟಿ ಮತ್ತು ಚುನಾವಣೆಗೆ ಸಂಬಂಧಿಸಿದ ಇತರ ಆಡಳಿತಾತ್ಮಕ ಸಿದ್ಧತೆಗಳ ಬಗ್ಗೆಯೂ ಸಮಾಲೋಚನೆ ನಡೆಸಿದೆ. ಚುನಾವಣಾ ಆಯೋಗದ ಈ ಮಹತ್ವದ ಸಭೆಯ ನಂತರ, ಎರಡೂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣಾ ದಿನಾಂಕ ಶೀಘ್ರದಲ್ಲೇ ಘೋಷಣೆಯಾಗಲಿದೆ.

ಮೂಲಗಳ ಪ್ರಕಾರ, ಈ ಎರಡೂ ರಾಜ್ಯಗಳ ವಿಧಾನಸಭಾ ಚುನಾವಣೆಗಳೊಂದಿಗೆ ಜಾರ್ಖಂಡ್ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಗುರುವಾರ, ಆಯೋಗವು ಎರಡೂ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಮುಖ ಮತ್ತು ಅಂತಿಮ ಸಭೆ ನಡೆಸಿತು.

ಚುನಾವಣಾ ಆಯೋಗದ ಮೂಲಗಳ ಪ್ರಕಾರ, ಆಯೋಗದ ತಂಡವು ಎರಡೂ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಅಕ್ಟೋಬರ್ ಎರಡನೇ ಮತ್ತು ಮೂರನೇ ವಾರದಲ್ಲಿ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದೆ. ಹರಿಯಾಣದಲ್ಲಿ1 ಹಂತದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದ್ದರೆ, ಮಹಾರಾಷ್ಟ್ರದಲ್ಲಿ 2 ರಿಂದ 3 ಹಂತಗಳಲ್ಲಿ ಮತದಾನದ ಸಾಧ್ಯತೆ ಇದೆ.

ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆ ಡಿಸೆಂಬರ್‌ನಲ್ಲಿ ನಡೆಯುವ ನಿರೀಕ್ಷೆಯಿದೆ. ಏಕೆಂದರೆ ಅಲ್ಲಿ ವಿಧಾನಸಭೆಯ ಅವಧಿ ಜನವರಿ ಮೊದಲ ವಾರದಲ್ಲಿ ಕೊನೆಗೊಳ್ಳಲಿದೆ. ಪ್ರಸ್ತುತ ಮೂರು ರಾಜ್ಯಗಳಲ್ಲಿಯೂ ಬಿಜೆಪಿ ಸರ್ಕಾರವಿದೆ.
 

Trending News