ಫೆ.27ಕ್ಕೆ ಕರ್ನಾಟಕದ 4 ಸೇರಿದಂತೆ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ!
Rajya Sabha Election: ಕೇಂದ್ರ ಚುನಾವಣೆ ಆಯೋಗವು ರಾಜ್ಯಸಭಾ ಚುನಾವಣೆಯ ದಿನಾಂಕ ಘೋಷಿಸಿದೆ. ಕರ್ನಾಟಕದ ೪ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.
ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿವೆ. ಇದರ ನಡುವೆಯೇ ಕೇಂದ್ರ ಚುನಾವಣೆ ಆಯೋಗವು ರಾಜ್ಯಸಭಾ ಚುನಾವಣೆಯ ದಿನಾಂಕ ಘೋಷಿಸಿದೆ. ಕರ್ನಾಟಕದ ೪ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.
ಫೆಬ್ರವರಿ 27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಸೋಮವಾರ ಮಾಹಿತಿ ನೀಡಿದೆ. ಉಮೇದುವಾರಿಕೆ ಸಲ್ಲಿಸಲು ಫೆ.15 ಕೊನೆಯ ದಿನವಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ. ಕರ್ನಾಟಕದ ೪ ಸ್ಥಾನಗಳು ಸೇರಿ ಒಟ್ಟು 15 ರಾಜ್ಯಗಳ 56 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆ.16ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಫೆಬ್ರವರಿ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಮತದಾನ ನಡೆಯುವ ಫೆ.27ರಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿಯಾಗಿದೆ.
ಅಯೋಧ್ಯೆಯಲ್ಲಿ ಮಾತ್ರವಲ್ಲ, ದೇಶದ ಈ ನಗರಗಳಲ್ಲಿಯೂ ಶ್ರೀರಾಮನ ಭವ್ಯವಾದ ದೇವಾಲಯಗಳಿವೆ!
ಯಾವ ರಾಜ್ಯಗಳಲ್ಲಿ ಎಷ್ಟು ಸ್ಥಾನಗಳಿಗೆ ಚುನಾವಣೆ?
ರಾಜ್ಯ | ಸ್ಥಾನ |
ಕರ್ನಾಟಕ | 4 |
ಆಂಧ್ರಪ್ರದೇಶ | 3 |
ಬಿಹಾರ | 6 |
ಛತ್ತೀಸ್‌ಗಢ | 1 |
ಗುಜರಾತ್ | 4 |
ಹರಿಯಾಣ | 1 |
ಹಿಮಾಚಲ ಪ್ರದೇಶ | 1 |
ಮಧ್ಯಪ್ರದೇಶ | 5 |
ಮಹಾರಾಷ್ಟ್ರ | 6 |
ತೆಲಂಗಾಣ | 3 |
ಉತ್ತರ ಪ್ರದೇಶ | 10 |
ಉತ್ತರಾಖಂಡ | 1 |
ಪಶ್ಚಿಮ ಬಂಗಾಳ | 5 |
ಒಡಿಶಾ | 3 |
ರಾಜಸ್ಥಾನ | 3 |
ಒಟ್ಟು | 56 |
ರಾಜ್ಯಸಭೆಯ ಪಕ್ಷವಾರು ಬಲಾಬಲ
ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಇದನ್ನೂ ಓದಿ: ʼಕ್ಷಮಿಸಿ ಅಪ್ಪ-ಅಮ್ಮ ಇದೇ ನನ್ನ ಕೊನೇ ಆಯ್ಕೆʼ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.