2014ರಲ್ಲಿ ಮೋದಿ ಗೆಲುವಿನ ರೂವಾರಿ ಈಗ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ
ಪ್ರಶಾಂತ್ ಕಿಶೋರ್ ಅವರ ಜೆಡಿಯುಗೆ ಸೇರ್ಪಡೆಗೊಂಡ ನಂತರ, ಅವರಿಗೆ ದೊಡ್ಡ ಜವಾಬ್ದಾರಿ ನೀಡಲಾಗುವುದು ಎಂದು ನಿತೀಶ್ ಕುಮಾರ್ ನಿರಂತರವಾಗಿ ಮನವೊಲಿಸಿದರು.
ಪಾಟ್ನಾ: ಖ್ಯಾತ ರಾಜಕೀಯ ತಜ್ಞ ಎಂದೇ ಹೆಸರುವಾಸಿಯಾಗಿರುವ, 2014ರಲ್ಲಿ ಮೋದಿ ಗೆಲುವಿನ ರೂವಾರಿಯಾಗಿದ್ದ, ಕಳೆದ ತಿಂಗಳಷ್ಟೇ ಜೆಡಿಯುಗೆ ಸೇರ್ಪಡೆಯಾಗಿದ್ದ ಪ್ರಶಾಂತ್ ಕಿಶೋರ್ ಅವರಿಗೆ ಜನತಾ ದಳ ಯುನೈಟೆಡ್ (ಜೆಡಿಯು) ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ದೊಡ್ಡ ಜವಾಬ್ದಾರಿಯೊಂದನ್ನು ನೀಡಿದ್ದಾರೆ. ಹೌದು ಚುನಾವಣಾ ಪ್ರಚಾರಕ ಎಂದು ಹೆಸರುವಾಸಿಯಾಗಿರುವ ಪ್ರಶಾಂತ್ ಕಿಶೋರ್ ಅವರಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಅಯ್ಕೆಮಾದಲಾಗಿದೆ.
ಪ್ರಶಾಂತ್ ಕಿಶೋರ್ ಅವರ ಜೆಡಿಯುಗೆ ಸೇರ್ಪಡೆಗೊಂಡ ನಂತರ, ಅವರಿಗೆ ದೊಡ್ಡ ಜವಾಬ್ದಾರಿ ನೀಡಲಾಗುವುದು ಎಂದು ನಿತೀಶ್ ಕುಮಾರ್ ನಿರಂತರವಾಗಿ ಮನವೊಲಿಸಿದರು.
2014 ರ ಲೋಕಸಭೆ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರು ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ತಂತ್ರಗಾರಿಕೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿದುಬಂದಿದೆ. ಅದರ ನಂತರ 2015 ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಮಹಾಘಟಬಂದನ್ ಗಾಗಿ ಕೆಲಸ ಮಾಡಿದ್ದರು. ಹಾಗಾಗಿ ಈ ಮಹಾ ಚುನಾವಣೆಯಲ್ಲಿ ಬಿಜೆಪಿ ಸೋಲುನಬೇಕಾಯಿತು.
ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ. ತ್ಯಾಗಿ ಅವರು ಪ್ರಶಾಂತ್ ಕಿಶೋರ್ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿರುವ ಪಕ್ಷದ ನಿರ್ಧಾರವನ್ನು ಸ್ವಾಗತಿಸಿದ್ದು, ಪ್ರಶಾಂತ್ ಕಿಶೋರ್ ಅವರನ್ನು ಅಭಿನಂದಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಪ್ರಶಾಂತ್ ಕಿಶೋರ್ ಅವರ ನೇಮಕವನ್ನು ಸ್ವಾಗತಿಸುವುದಾಗಿ ತಿಳಿಸಿದ ಕೆ.ಸಿ. ತ್ಯಾಗಿ, ಪಕ್ಷವು ದುರ್ಬಲವಾಗಿರುವ ಪ್ರದೇಶಗಳಲ್ಲೂ ಸಹ ಉತ್ತಮ ಫಲಿತಾಂಶ ಹೊರಬೀಳಲಿದೆ. ಅವರು ಪಕ್ಷಕ್ಕೆ ಹೊಸ ಆಯಾಮ ನೀಡುವಲ್ಲಿ ಯಶಸ್ವಿಯಾಗಲಿದ್ದಾರೆ ಎಂಬ ನಂಬಿಕೆಯಿದೆ ಎಂದು ತಮ್ಮ ವಿಶ್ವಾಸ ವ್ಯಕ್ತಪಡಿಸಿದರು.